alex Certify
ಕನ್ನಡ ದುನಿಯಾ       Mobile App
       

Kannada Duniya

ಶುಭ ಸುದ್ದಿ: ‘ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನಕ್ಕೆ ಕೊನೆಗೂ ದಿನಾಂಕ ನಿಗದಿ

ನವೆಂಬರ್ 1 ರ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನಾಡಿನ ಸಾಧಕರಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿ ಸಮಾರಂಭ, ಉಪ ಚುನಾವಣೆ ನೀತಿ ಸಂಹಿತೆ ಕಾರಣದಿಂದಾಗಿ ಮುಂದೂಡಲ್ಪಟ್ಟಿತ್ತು.

ಬಳಿಕ ಅದನ್ನು ನವೆಂಬರ್ 15 ಕ್ಕೆ ನಿಗದಿಪಡಿಸಲಾಗಿತ್ತಾದರೂ ಪ್ರಶಸ್ತಿ ವಿಜೇತರ ಪಟ್ಟಿ ಅಂತಿಮಗೊಳ್ಳದ ಕಾರಣ ಮತ್ತೊಮ್ಮೆ ಮುಂದೂಡಲ್ಪಟ್ಟಿತ್ತು.

ಇದೀಗ ಸರ್ಕಾರ ಕೊನೆಗೂ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲು ದಿನಾಂಕ ನಿಗದಿಪಡಿಸಿದ್ದು, ನವೆಂಬರ್ 30 ರಂದು ಈ ಸಮಾರಂಭ ನಡೆಯಲಿದೆ ಎಂದು ತಿಳಿದುಬಂದಿದೆ. 63ನೇ ಕನ್ನಡ ರಾಜ್ಯೋತ್ಸವವಾಗಿರುವ ಕಾರಣ 63 ಮಂದಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡುವ ನಿರೀಕ್ಷೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...