alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡ ರಾಜ್ಯೋತ್ಸವ ಆಚರಣೆಗೆ ಕ್ಷಣಗಣನೆ

ಕನ್ನಡಿಗರ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲು ನಾಡಿನೆಲ್ಲೆಡೆ ಸಿದ್ದತೆ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾಡು, ನುಡಿಗಾಗಿ ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಲಾಗುತ್ತದೆ.

ರಾಜ್ಯೋತ್ಸವದ ಅಂಗವಾಗಿ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹರಿದು ಹಂಚಿಹೋಗಿದ್ದ ಕನ್ನಡ ನಾಡು ಏಕೀಕರಣಗೊಳ್ಳಲು ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಲಾಗುತ್ತದೆ. 1956 ರಲ್ಲಿ ಮೈಸೂರು ರಾಜ್ಯದ ಉದಯವಾಗಿದ್ದು, 1973 ನವೆಂಬರ್ 1 ರಂದು ಕರ್ನಾಟಕ ರಾಜ್ಯ ಎಂದು ನಾಮಕರಣ ಮಾಡಲಾಯಿತು.

ಕನ್ನಡ ಸಾಹಿತ್ಯ ಪರಿಷತ್, ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಅನೇಕ ಕನ್ನಡಪರ ಸಂಘ, ಸಂಸ್ಥೆಗಳು, ಸಂಘಟನೆಗಳು ನಾಡು, ನುಡಿಯ ಅಭಿವೃದ್ಧಿಗೆ ಕೆಲಸ ಮಾಡುತ್ತಿವೆ. ಹೊರ ರಾಜ್ಯ ಹಾಗೂ ದೇಶಗಳಲ್ಲಿ ನೆಲೆಸಿರುವ ಕನ್ನಡಿಗರೂ ಕನ್ನಡ ರಾಜ್ಯೋತ್ಸವದ ಆಚರಣೆಗೆ ಸಿದ್ದತೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...