alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವರು, ನೌಕರರ ಮಕ್ಕಳಿಗೆ ಸರ್ಕಾರಿ ಶಾಲೆ ಕಡ್ಡಾಯ..?

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಇನ್ನು ಮುಂದೆ ಸರ್ಕಾರಿ ನೌಕರರು, ಮುಖ್ಯಮಂತ್ರಿ, ಸಚಿವರ ಮಕ್ಕಳು ಸರ್ಕಾರಿ ಶಾಲೆಯಲ್ಲಿಯೇ ಓದುವುದನ್ನು ಕಡ್ಡಾಯಗೊಳಿಸುವ ವಿಧೇಯಕವನ್ನು ವಿಧಾನಪರಿಷತ್ ನಲ್ಲಿ ಮಂಡಿಸಲಿದೆ.

ರಾಜ್ಯ ಸರ್ಕಾರದ ಕರ್ನಾಟಕ ವಾರ್ತೆ ವೆಬ್ ಸೈಟ್ ನಲ್ಲಿ ಈ ಕುರಿತು ಮಾಹಿತಿ ನೀಡಲಾಗಿದ್ದು, ಸರ್ಕಾರಿ ನೌಕರರು, ಸಚಿವರ ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಓದಿಸಬೇಕೆಂದು ವಿಧೇಯಕ ಮಂಡಿಸುವುದಾಗಿ ತಿಳಿಸಲಾಗಿದೆ.

ಮಂಗಳವಾರ ಮಧ್ಯಾಹ್ನ ಈ ಕುರಿತು ಟ್ವೀಟ್ ಮಾಡಿ ನಂತರದಲ್ಲಿ ಡಿಲೀಟ್ ಮಾಡಲಾಗಿದೆ. ಹಿಂದಿನಿಂದಲೂ ಸರ್ಕಾರಿ ಶಾಲೆಗಳಲ್ಲಿ ನೌಕರರು, ಸಚಿವರ ಮಕ್ಕಳನ್ನು ಓದಿಸಬೇಕೆಂದು ಹೇಳಲಾಗ್ತಿದೆ. ಆದರೆ ಕಾರ್ಯರೂಪಕ್ಕೆ ಬಂದಿರಲಿಲ್ಲ.

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಇಂತಹುದೊಂದು ನಿರ್ಧಾರಕ್ಕೆ ಬರಲಾಗಿದೆ. ಆದರೆ, ಮಾಹಿತಿ ನೀಡಲಾಗಿದ್ದ ಟ್ವೀಟ್ ಡಿಲಿಟ್ ಮಾಡಿರುವುದರಿಂದ ವಿಧೇಯಕ ಮಂಡನೆಯಾಗುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...