alex Certify
ಕನ್ನಡ ದುನಿಯಾ       Mobile App
       

Kannada Duniya

ದುಷ್ಕರ್ಮಿಗಳಿಂದ ಕಪ್ಪತಗುಡ್ಡಕ್ಕೆ ಬೆಂಕಿ

kapat-fire

ಗದಗ: ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಕರೆಯಲ್ಪಡುವ, ಕಪ್ಪತಗುಡ್ಡಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು, 10 ಕ್ಕೂ ಅಧಿಕ ಎಕರೆಯಷ್ಟು ಅರಣ್ಯ ಪ್ರದೇಶ ಸುಟ್ಟು ಹೋಗಿದೆ.

ಅಮೂಲ್ಯವಾದ ಆಯುರ್ವೇದ ಔಷಧ ಸಸ್ಯ ಸಂಪತ್ತು ನಾಶವಾಗಿದೆ. ಸುಮಾರು 63 ಕಿಲೋ ಮೀಟರ್ ವ್ಯಾಫ್ತಿಯ ಕಪ್ಪತಗುಡ್ಡ ಪ್ರದೇಶದ 3-4 ಕಡೆಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬಿಳನಾಳ, ವಿರುಪಾಪುರದಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಗ್ರಾಮಸ್ಥರು, ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಆದರೆ, ಗಂಟೆಗಳ ಕಾಲ ಕಾದರೂ, ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಲಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಪ್ಪತಗುಡ್ಡವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸುವಂತೆ ಒತ್ತಾಯಿಸಿ ಬೃಹತ್ ಹೋರಾಟವೇ ನಡೆದಿತ್ತು. ಇದೇ ಸಂದರ್ಭದಲ್ಲಿ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ.

ಈ ಪ್ರದೇಶದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಹಾದು ಹೋಗಿದ್ದು, ಅವುಗಳಿಂದ ಬೆಂಕಿ ತಗುಲಿರಬಹುದೆಂದು ಹೇಳಲಾಗುತ್ತಿದೆ.

ಅದೇನೆ ಇರಲಿ, ಅಮೂಲ್ಯವಾದ ಸಸ್ಯ ಸಂಪತ್ತನ್ನು ಉಳಿಸಿಕೊಳ್ಳಬೇಕೆಂದು ಸುತ್ತಲಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...