alex Certify
ಕನ್ನಡ ದುನಿಯಾ       Mobile App
       

Kannada Duniya

ಬೈಕ್ ಮೇಲೆ ಟಿಪ್ಪರ್ ಬಿದ್ದು ಮೂವರ ಸಾವು

ಕಾರವಾರ : ಕಾರವಾರ ತಾಲ್ಲೂಕಿನ ಬಿಣಗಾ ಬಳಿ ಬೈಕ್ ಮೇಲೆ ಟಿಪ್ಪರ್ ಉರುಳಿ ಬಿದ್ದು ಮೂವರು ಮೃತಪಟ್ಟಿದ್ದಾರೆ.

ಅಮಿತ್ ಕೌಶಲ್(31), ಜ್ಯೋತಿ ಗುಪ್ತಾ(25) ಹಾಗೂ 2 ವರ್ಷದ ಗಂಡು ಮಗು ಮೃತಪಟ್ಟಿದ್ದಾರೆ. ಬಿಣಗಾ ಗ್ರಾಮದಿಂದ ಬೈಕ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾಗುತ್ತಿದ್ದ ವೇಳೆ ಟಿಪ್ಪರ್ ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವೇಗವಾಗಿದ್ದ ಟಿಪ್ಪರ್, ಚಾಲಕನ ನಿಯಂತ್ರಣ ತಪ್ಪಿ, ಬೈಕ್ ಮೇಲೆ ಬಿದ್ದಿದೆ. ಕಾರವಾರ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...