alex Certify
ಕನ್ನಡ ದುನಿಯಾ       Mobile App
       

Kannada Duniya

ಎತ್ತಿನಗಾಡಿ ಏರಿದ ರಾಹುಲ್ ನೀಡಿದ್ರು ರೈತರ ಸಾಲ ಮನ್ನಾ ಮಾಡುವ ಭರವಸೆ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೈದೆ ದಿನ ಬಾಕಿ ಇದೆ. ಚುನಾವಣಾ ರಣಾಂಗಣದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೋಮವಾರ ಕರ್ನಾಟಕದಲ್ಲಿ ಪ್ರಚಾರ ನಡೆಸ್ತಿದ್ದಾರೆ. ಕೋಲಾರದಲ್ಲಿ ಮತದಾರರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, 2019 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ರೈತರ ಎಲ್ಲ ಸಾಲಗಳನ್ನು ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಕೋಲಾರದಲ್ಲಿ ರಾಹುಲ್ ಗಾಂಧಿ ಬಿಜೆಪಿ ಸರ್ಕಾರದ ವಿರುದ್ಧ ರೋಡ್ ಶೋ ನಡೆಸಿದ್ರು. ಏರುತ್ತಿರುವ ಪೆಟ್ರೋಲ್, ಡೀಸೆಲ್ ಬೆಲೆ ವಿರೋಧಿಸಿ ಎತ್ತಿನ ಗಾಡಿಯಲ್ಲಿ ಪ್ರಯಾಣ ಬೆಳೆಸಿದ್ರು. ರೈತರ ಬಗ್ಗೆ ಮಾತನಾಡುವ ಪಿಎಂ ರೈತರಿಗಾಗಿ ಏನೂ ಮಾಡಿಲ್ಲವೆಂದು ಆರೋಪಿಸಿದ್ರು.

ಇತ್ತ ಗದಗದಲ್ಲಿ ಪ್ರಚಾರ ರ್ಯಾಲಿ ನಡೆಸಿದ ಅಮಿತ್ ಷಾ, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ. ಮೇ 15 ರ ನಂತ್ರ ಕರ್ನಾಟಕದಿಂದ ಕಾಂಗ್ರೆಸ್ ಹೊರಬೀಳಲಿದೆ ಎಂದಿದ್ದಾರೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಕೂಡ ಕಾಂಗ್ರೆಸ್ ಕಾಲೆಳೆದಿದ್ದಾರೆ. ದೇಶದಲ್ಲಿ ಯಾವುದೇ ದೊಡ್ಡ ಘಟನೆಗಳಾಗ್ಲಿ ರಾಹುಲ್ ಗಾಂಧಿ ಇಟಲಿಗೆ ಓಡಿ ಹೋಗ್ತಾರೆಂದು ವ್ಯಂಗ್ಯವಾಡಿದ್ದಾರೆ.

ಇನ್ನು ಸಿಎಂ ಸಿದ್ಧರಾಮಯ್ಯ ಬಿಜೆಪಿ ಸಿಎಂ ಅಭ್ಯರ್ಥಿ ಯಡಿಯೂರಪ್ಪನವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಬಹಿರಂಗ ಚರ್ಚೆಗೆ ಪಿಎಂ ಮೋದಿ ಕೂಡ ಬರಬಹುದು ಎಂದಿದ್ದಾರೆ.

ಕಾಂಗ್ರೆಸ್, ಬಿಜೆಪಿ ನಾಯಕರುಗಳು ಅಬ್ಬರದ ಪ್ರಚಾರ ನಡೆಸುತ್ತಿದ್ದರೆ ಜೆಡಿಎಸ್ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ರೈತರಿಗೆ ಸಾಲದಲ್ಲಿ ಶೇಕಡಾ 100ರಷ್ಟು ವಿನಾಯಿತಿ ನೀಡುವುದಾಗಿ ಜೆಡಿಎಸ್ ಭರವಸೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...