alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಎಂಟಿಸಿ ಬಸ್ ಗಳ ಮೇಲೆ ಇನ್ನೂ ರಾರಾಜಿಸುತ್ತಿದೆ ಸರ್ಕಾರಿ ಜಾಹೀರಾತು

ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಒ.ಪಿ. ರಾವತ್ ಮಂಗಳವಾರದಂದು ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಿದ್ದು, ಮೇ 12 ರಂದು ಮತದಾನ ಹಾಗೂ ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ.

ಮಂಗಳವಾರದಿಂದಲೇ ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಗೆ ಬಂದಿದ್ದು, ಸರ್ಕಾರಿ ಜಾಹೀರಾತುಗಳನ್ನು ತೆರವುಗೊಳಿಸುತ್ತಿರುವ ಕಾರ್ಯ ನಡೆಯುತ್ತಿರುವುದರ ಮಧ್ಯೆ ಬಿಎಂಟಿಸಿ ಬಸ್ ಗಳ ಮೇಲೆ ಇನ್ನೂ ಸರ್ಕಾರಿ ಜಾಹೀರಾತುಗಳು ರಾರಾಜಿಸುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.

ಅಧಿಕಾರಸ್ಥರ ಒತ್ತಡದ ಹಿನ್ನಲೆಯಲ್ಲಿ ಬಿಎಂಟಿಸಿ ಬಸ್ ಗಳ ಮೇಲಿನ ಜಾಹೀರಾತು ಫಲಕವನ್ನು ತೆರವುಗೊಳಿಸಲಾಗಿಲ್ಲವೆಂಬ ಮಾತುಗಳು ಕೇಳಿ ಬರುತ್ತಿದ್ದು, ರಾಜ್ಯ ಚುನಾವಣಾ ಆಯೋಗದ ಗಮನಕ್ಕೂ ಜಾಹೀರಾತು ಫಲಕದ ಕುರಿತು ಮಾಹಿತಿ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಈಗ ಬಿಎಂಟಿಸಿ ಬಸ್ ಗಳ ಮೇಲಿನ ಜಾಹೀರಾತು ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...