alex Certify
ಕನ್ನಡ ದುನಿಯಾ       Mobile App
       

Kannada Duniya

ಬಿರು ಬಿಸಿಲಿನಲ್ಲೂ ಘೋಷಿತ ಅಭ್ಯರ್ಥಿಗಳ ಭರ್ಜರಿ ಪ್ರಚಾರ

ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಘೋಷಿತ ಅಭ್ಯರ್ಥಿಗಳು ಈಗಾಗಲೇ ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಿವಮೊಗ್ಗ ನಗರ, ಶಿವಮೊಗ್ಗ ಗ್ರಾಮಾಂತರ, ಭದ್ರಾವತಿ, ಶಿಕಾರಿಪುರ, ಸಾಗರ, ಸೊರಬ, ತೀರ್ಥಹಳ್ಳಿ ಕ್ಷೇತ್ರಗಳಿದ್ದು, ಜೆಡಿಎಸ್ ನಿಂದ ಸಾಗರ ಕ್ಷೇತ್ರ ಹೊರತುಪಡಿಸಿ ಉಳಿದ ಕ್ಷೇತ್ರಗಳಿಗೆ ಅಧಿಕೃತವಾಗಿ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಶಿವಮೊಗ್ಗದಿಂದ ಹೆಚ್.ಎನ್. ನಿರಂಜನ್, ಸೊರಬದಿಂದ ಮಧು ಬಂಗಾರಪ್ಪ, ಶಿಕಾರಿಪುರದಿಂದ ಹೆಚ್.ಟಿ. ಬಳಿಗಾರ್, ತೀರ್ಥಹಳ್ಳಿಯಿಂದ ಆರ್.ಎಂ. ಮಂಜುನಾಥ ಗೌಡ, ಭದ್ರಾವತಿಯಿಂದ ಎಂ.ಜೆ. ಅಪ್ಪಾಜಿ, ಶಿವಮೊಗ್ಗ ಗ್ರಾಮಾಂತರದಿಂದ ಶಾರದಾ ಪೂರ್ಯನಾಯ್ಕ ಅವರಿಗೆ ಟಿಕೆಟ್ ಘೋಷಣೆಯಾಗಿದ್ದು, ಇವರೆಲ್ಲರೂ ತಮ್ಮ ಕ್ಷೇತ್ರಗಳಲ್ಲಿ ಒಂದು ಸುತ್ತಿನ ಪ್ರಚಾರ ನಡೆಸಿದ್ದಾರೆ.

ಬಿಜೆಪಿಯಿಂದ ಶಿಕಾರಿಪುರಕ್ಕೆ ಬಿ.ಎಸ್.ಯಡಿಯೂರಪ್ಪ ಅಭ್ಯರ್ಥಿಯಾಗಿದ್ದಾರೆ. ಶಿವಮೊಗ್ಗದಿಂದ ಕೆ.ಎಸ್.ಈಶ್ವರಪ್ಪ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆದರೆ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಬಿಜೆಪಿ ತನ್ನ ಎರಡನೇ ಪಟ್ಟಿಯಲ್ಲಿ ಘೋಷಣೆ ಮಾಡಲಿದೆ. ಸೊರಬದಿಂದ ಕುಮಾರ್ ಬಂಗಾರಪ್ಪ, ತೀರ್ಥಹಳ್ಳಿಯಿಂದ ಆರಗ ಜ್ಞಾನೇಂದ್ರ, ಸಾಗರದಿಂದ ಬೇಳೂರು ಗೋಪಾಲಕೃಷ್ಣ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಭದ್ರಾವತಿ, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದ್ದು, ತೀವ್ರ ಪೈಪೋಟಿ ಕಂಡು ಬಂದಿರುವುದರಿಂದ ಟಿಕೆಟ್ ಹಂಚಿಕೆಯಲ್ಲಿ ತೀವ್ರ ಕಸರತ್ತು ನಡೆಯುತ್ತಿದೆ.

ಕಾಂಗ್ರೆಸ್ ನಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರಕ್ಕೂ ಅಧಿಕೃತವಾಗಿ ಅಭ್ಯರ್ಥಿಗಳ ಪಟ್ಟಿ ಘೋಷಣೆಯಾಗಿಲ್ಲ. ಇಂದು ಅಥವಾ ನಾಳೆಯೊಳಗಾಗಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಯಾರ್ಯಾರಿಗೆ ಟಿಕೆಟ್ ಸಿಗಲಿದೆ ಎಂಬುದರ ಬಗ್ಗೆ ಕಾರ್ಯಕರ್ತರಲ್ಲಿ ಕುತೂಹಲ ಮೂಡಿಸಿದೆ. ಆಕಾಂಕ್ಷಿಗಳಲ್ಲೂ ಆತಂಕ ಹೆಚ್ಚಾಗಿದೆ.

ಶಿವಮೊಗ್ಗದಿಂದ ಕೆ.ಬಿ. ಪ್ರಸನ್ನಕುಮಾರ್, ತೀರ್ಥಹಳ್ಳಿಯಿಂದ ಕಿಮ್ಮನೆ ರತ್ನಾಕರ್, ಸಾಗರದಿಂದ ಕಾಗೋಡು ತಿಮ್ಮಪ್ಪ ಕಳೆದ ಚುನಾವಣೆಯಲ್ಲಿ ಗೆಲುವು ಕಂಡಿದ್ದು ಈ ಬಾರಿಯೂ ಅವರಿಗೇ ಟಿಕೆಟ್ ಸಿಗುವ ಸಾಧ್ಯತೆ ಇದೆ. ಉಳಿದ ಕ್ಷೇತ್ರಗಳಾದ ಭದ್ರಾವತಿಯಿಂದ ಬಿ.ಕೆ.ಸಂಗಮೇಶ್ವರ್ ಅವರಿಗೆ ಟಿಕೆಟ್ ಖಚಿತವಾಗಿದೆ.  ಶಿವಮೊಗ್ಗ ಗ್ರಾಮಾಂತರ, ಶಿಕಾರಿಪುರ, ಸೊರಬ ಕ್ಷೇತ್ರಗಳಲ್ಲಿ ಆಕಾಂಕ್ಷಿಗಳು ಹೆಚ್ಚಾಗಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಬಗ್ಗೆ ವರಿಷ್ಟರು ತೀರ್ಮಾನ ಕೈಗೊಳ್ಳಬೇಕಿದೆ.

ಜಿಲ್ಲೆಯಲ್ಲಿ ರಾಜಕೀಯ ಪಕ್ಷಗಳ ಚಟವಟಿಕೆಗಳು ಚುರುಕುಗೊಳ್ಳತೊಡಗಿದೆ. ಮತದಾನ ಪ್ರಮಾಣ ಹೆಚ್ಚಳಕ್ಕೆ ಚುನಾವಣಾ ಆಯೋಗ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...