alex Certify
ಕನ್ನಡ ದುನಿಯಾ       Mobile App
       

Kannada Duniya

ಟಿಕೇಟ್ ‘ಕೈ’ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಎನ್. ಸಂಪಂಗಿ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ತಮಗೇ ಸಿಗುತ್ತದೆಂಬ ನಿರೀಕ್ಷೆಯಲ್ಲಿದ್ದ ಮಾಜಿ ಶಾಸಕ ಎನ್. ಸಂಪಂಗಿ, ಟಿಕೇಟ್ ‘ಕೈ’ ತಪ್ಪುತ್ತಿದ್ದಂತೆಯೇ ಬೆಂಬಲಿಗರ ಮುಂದೆ ಕಣ್ಣೀರಿಟ್ಟಿದ್ದಾರೆಂದು ತಿಳಿದುಬಂದಿದೆ.

ತಮಗೆ ಟಿಕೇಟ್ ಕೈ ತಪ್ಪಲು ಲೋಕಸಭಾ ಸದಸ್ಯ ವೀರಪ್ಪ ಮೊಯ್ಲಿಯವರೇ ಕಾರಣವೆಂದು ಬೆಂಬಲಿಗರ ಮುಂದೆ ಆಕ್ರೋಶ ವ್ಯಕ್ತಪಡಿಸಿರುವ ಸಂಪಂಗಿ, ಸಂಘಟನೆಗಿಂತ ಹಣವೇ ಮುಖ್ಯವಾದದ್ದೇ ತಮಗೆ ಟಿಕೇಟ್ ತಪ್ಪಲು ಕಾರಣವೆಂದು ಹೇಳಿದರೆನ್ನಲಾಗಿದೆ.

ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಹೆಚ್.ಎನ್. ಸುಬ್ಬಾರೆಡ್ಡಿಯವರ ಪಾಲಾಗಿದ್ದು, ಈ ಹಿನ್ನಲೆಯಲ್ಲಿ ತಮ್ಮ ಬೆಂಬಲಿಗರ ಜೊತೆ ಸಮಾಲೋಚನೆ ನಡೆಸಿರುವ ಸಂಪಂಗಿ, ಪಕ್ಷೇತರರಾಗಿ ಸ್ಪರ್ಧಿಸಲು ಸಿದ್ದತೆ ನಡೆಸಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...