alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗದಲ್ಲೂ ಬಂದ್ ಗೆ ನೀರಸ ಪ್ರತಿಕ್ರಿಯೆ

ಶಿವಮೊಗ್ಗ: ರೈತರ ಸಾಲ ಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಚನಭ್ರಷ್ಟರಾಗಿದ್ದದಾರೆ ಎಂದು ಆರೋಪಿಸಿ ಬಿಜೆಪಿ ಕರೆ ನೀಡಿದ್ದ ಸ್ವಯಂಪ್ರೇರಿತ ಕರ್ನಾಟಕ ಬಂದ್ ಗೆ ಶಿವಮೊಗ್ಗ ನಗರದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಸರ್ಕಾರಿ ಕಚೇರಿಗಳು, ಬ್ಯಾಂಕುಗಳು, ಹೋಟೆಲ್, ಚಿತ್ರಮಂದಿರ, ಆಟೋ, ಟ್ಯಾಕ್ಸಿ, ಸರ್ಕಾರಿ ಹಾಗೂ ಖಾಸಗಿ ಬಸ್ ಸೇವೆ ಎಂದಿನಂತೆ ಮುಂದುವರೆದಿತ್ತು. ನಗರದ ಪ್ರಮುಖ ವಾಣಿಜ್ಯ ಸ್ಥಳಗಳಾದ ಬಿ.ಹೆಚ್. ರಸ್ತೆ, ಗಾಂಧಿಬಜಾರ್, ನೆಹರೂ ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಸವಳಂಗ ರಸ್ತೆಯಲ್ಲಿ ವಾಣಿಜ್ಯ ಮಳಿಗೆಗಳು ಎಂದಿನಂತೆ ತೆರೆದಿದ್ದವು.

ನಗರ ಸಾರಿಗೆ ಬಸ್ ಗಳು ಎಂದಿನಂತೆ ಸಂಚರಿಸಿದರೆ ಬೆಳಿಗ್ಗೆಯಿಂದಲೇ ಕೆಎಸ್ಆರ್ಟಿಸಿ ಬಸ್ ಗಳು ದೂರದೂರುಗಳಿಗೆ ತೆರಳುತ್ತಿರುವುದು ಕಂಡುಬಂದಿತು. ಶಿವಮೊಗ್ಗ-ಭದ್ರಾವತಿ ನಡುವೆ ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲೂ ಯಾವುದೇ ವ್ಯತ್ಯಯ ಕಂಡುಬರಲಿಲ್ಲ.

ಜನಸಂಚಾರ ಎಂದಿನಂತೆಯೇ ಇತ್ತು. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಪ್ರಮುಖ ಸ್ಥಳ ಹಾಗೂ ವೃತ್ತಗಳಲ್ಲಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಶಾಲಾ ಕಾಲೇಜುಗಳು ಎಂದಿನಂತೆ ನಡೆದವು.

ಬಿಜೆಪಿ ಕಾರ್ಯಕರ್ತರು ಸರ್ಕಾರದ ವಿರುದ್ದ ಘೋಷಣೆ ಕೂಗುತ್ತಾ ನಗರದಲ್ಲಿ ಮೆರವಣಿಗೆ ನಡೆಸಿದರು. ಶಿವಮೂರ್ತಿ ಸರ್ಕಲ್ ನಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು ಮಹಾವೀರ ವೃತ್ತದಲ್ಲಿ ಅಂಗಡಿ ಮುಚ್ಚುವಂತೆ ಒತ್ತಾಯಿಸುತ್ತಿದ್ದ ದೃಶ್ಯ ಕಂಡುಬಂದಿತು. ಒತ್ತಾಯಪೂರ್ವಕವಾಗಿ ಬಂದ್ ಮಾಡದಂತೆ ಪೊಲೀಸರು ಪ್ರತಿಭಟನಾನಿರತರಿಗೆ ಸೂಚಿಸಿದರು.

ಇದೇ ವೇಳೆ ಶಿವಮೂರ್ತಿ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿಯ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು. ಬಿಜೆಪಿಯ ಕೆಲ ಕಾರ್ಯಕರ್ತರು ರಾಮಣ್ಣ ಶ್ರೇಷ್ಟಿ ಪಾರ್ಕ್ ನಿಂದ ಮೆರವಣಿಗೆ ನಡೆಸಿ ಶಿವಪ್ಪ ನಾಯಕ ವೃತ್ತದಲ್ಲಿ ಪ್ರತಿಭಟಿಸಿದರು. ನೀಡಿದ್ದ ಭರವಸೆಯಂತೆ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...