alex Certify
ಕನ್ನಡ ದುನಿಯಾ       Mobile App
       

Kannada Duniya

ಜೂನ್ 12 ರಂದು ಕರ್ನಾಟಕ ಬಂದ್ ಗೆ ಕರೆ

bandh-dd

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಜೂನ್ 12 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

ರಾಜ್ಯದ ಕಳಸಾ ಬಂಡೂರಿ ಯೋಜನೆ, ತುಂಗಾಭದ್ರಾ ಡ್ಯಾಂ ಹೂಳು ತೆಗೆಯುವುದು, ಬಯಲುಸೀಮೆ ಪ್ರದೇಶಗಳಿಗೆ ನೀರೊದಗಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ.

ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದ್ ಹಾಗೂ ವಿವಿಧ ಕನ್ನಡ ಸಂಘಟನೆಗಳ ಮುಖಂಡರು ಬಂದ್ ಗೆ ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.

ಅಂದು ಬೆಂಗಳೂರು ಟೌನ್ ಹಾಲ್ ನಿಂದ ಪ್ರತಿಭಟನಾ ಮೆರವಣಿಗೆ ಹೊರಡಲಿದ್ದು, ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ.

ಆದರೆ, ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣ ಗೌಡ ಬಣ ಸೇರಿದಂತೆ ವಿವಿಧ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...