alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಗಳಿಗೂ ತಟ್ಟಿದ ‘ಬಂದ್’ ಬಿಸಿ- ಬಿ.ಎಂ.ಟಿ.ಸಿ., ಕೆ.ಎಸ್.ಆರ್.ಟಿ.ಸಿ. ಸಂಚಾರ ಸ್ಥಗಿತ

ಬೆಂಗಳೂರು: ಬೆಳಗಿನ ಜಾವ ಬಿ.ಎಂ.ಟಿ.ಸಿ. ಬಸ್ ಸಂಚಾರ ಎಂದಿನಂತೆ ಆರಂಭವಾಗಿತ್ತಾದರೂ, ಬಂದ್ ಬಿಸಿ ಏರುತ್ತಿದ್ದಂತೆಯೇ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸುವ ಬಗ್ಗೆ ತೀರ್ಮಾನಿಸುವುದಾಗಿ ಹೇಳಲಾಗಿತ್ತು. ಅದರಂತೆ ಬೆಳಿಗ್ಗೆ ಎಂದಿನಂತೆ ಬಸ್ ಸಂಚಾರ ಆರಂಭವಾಗಿದ್ದು, ಮಹದಾಯಿ ಹೋರಾಟಗಾರರು ಮೆಜೆಸ್ಟಿಕ್ ಸೇರಿದಂತೆ ವಿವಿಧ ಕಡೆಗಳಲ್ಲಿ ಪ್ರತಿಭಟನೆ ನಡೆಸಿದ್ದರಿಂದ, ಬಿ.ಎಂ.ಟಿ.ಸಿ. ಹಾಗೂ ಕೆ.ಎಸ್.ಆರ್.ಟಿ.ಸಿ. ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ಇದರಿಂದಾಗಿ ಹೊರಗಿನಿಂದ ಬಂದ ಜನ ಮತ್ತು ಬೆಂಗಳೂರಿನಿಂದ ವಿವಿಧೆಡೆ ತೆರಳುವವರು ಪರದಾಡುವಂತಾಗಿದೆ. ಬಂದ್ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ ಕಾರಣ, ಪ್ರಯಾಣಿಕರ ಸಂಖ್ಯೆ ವಿರಳವಾಗಿದೆ. ಕೆಲವು ಆಟೋ ಸಂಚಾರ ಹೊರತಾಗಿ ಮೆಜೆಸ್ಟಿಕ್ ಏರಿಯಾದಲ್ಲಿ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...