alex Certify
ಕನ್ನಡ ದುನಿಯಾ       Mobile App
       

Kannada Duniya

ಸಾಲು ಸಾಲು ರಜೆ, ಬದಲಾಯ್ತು ಕರ್ನಾಟಕ ಬಂದ್

ಬೆಂಗಳೂರು: ಮಹದಾಯಿ ಯೋಜನೆ ಜಾರಿಗೆ ಪ್ರಧಾನಿ ಮಧ್ಯ ಪ್ರವೇಶಿಸಬೇಕೆಂದು ಒತ್ತಾಯಿಸಿ, ಕನ್ನಡ ಸಂಘಟನೆಗಳ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್ ದಿನಾಂಕವನ್ನು ಬದಲಿಸಲಾಗಿದೆ.

ಈ ಮೊದಲು ಜನವರಿ 27 ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿತ್ತು. ದಿನಾಂಕವನ್ನು ಬದಲಿಸಿ ಜನವರಿ 25 ರಂದೇ ಬಂದ್ ಆಚರಿಸಲು ಒಕ್ಕೂಟ ತೀರ್ಮಾನಿಸಿದೆ.

ಜನವರಿ 26 ಶುಕ್ರವಾರ ಗಣರಾಜ್ಯೋತ್ಸವ, 27 ರಂದು ಶನಿವಾರ, 28 ರಂದು ಭಾನುವಾರ ವೀಕೆಂಡ್ ರಜೆ ಇರುತ್ತದೆ. ಹೀಗೆ ಸಾಲು ಸಾಲು ರಜೆ ಇರುವುದರಿಂದ ಜನವರಿ 25 ರಂದು ಗುರುವಾರ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಜನವರಿ 28 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಕನ್ನಡ ಸಂಘಟನೆಗಳ ಒಕ್ಕೂಟದಿಂದ ಜನವರಿ 25 ರಂದು ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಹದಾಯಿ ವಿಚಾರದಲ್ಲಿ ಸ್ಪಷ್ಟನೆ ನೀಡಬೇಕೆಂದು ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

ಜನವರಿ 25 ರಂದು ಕರ್ನಾಟಕ ಬಂದ್ ನಡೆಯಲಿದೆ ಎಂದು ಅವರು ತಿಳಿಸಿದ್ದು, ಪ್ರಧಾನಿಯವರು ಗೋವಾ ಸರ್ಕಾರವನ್ನು ವಜಾ ಮಾಡಿ ರಾಜ್ಯಕ್ಕೆ ಕುಡಿಯುವ ನೀರು ನೀಡಬೇಕೆಂದು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...