alex Certify
ಕನ್ನಡ ದುನಿಯಾ       Mobile App
       

Kannada Duniya

ನಾಳೆ ರಾಜ್ಯ ಬಂದ್ : ಏನಿರುತ್ತೆ? ಏನಿರಲ್ಲ?

ರೈತರ ಸಾಲ ಮನ್ನಾಕ್ಕೆ ಒತ್ತಾಯಿಸಿ ನಾಳೆ ರಾಜ್ಯ ಬಂದ್ ಗೆ ಬಿಜೆಪಿ ಕರೆ ನೀಡಿದೆ. ಬಿಜೆಪಿ ಬಂದ್ ಗೆ ಈವರೆಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ. ಮಂಗಳೂರು, ಹುಬ್ಬಳಿ-ಧಾರವಾಡ, ಕೋಲಾರ, ಬಳ್ಳಾರಿ, ಬೀದರ್, ಚಿತ್ರದುರ್ಗ, ದಾವಣಗೆರೆ, ಉಡುಪಿ, ಚಿಕ್ಕಮಗಳೂರಿನಲ್ಲಿ ಬಂದ್ ನಡೆಯುವ ಸಾಧ್ಯತೆ ಹೆಚ್ಚಿದೆ. ಅಲ್ಲಿ ಬಸ್ ಹಾಗೂ ಆಟೋ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಶಾಲಾ-ಕಾಲೇಜುಗಳ ಬಾಗಿಲು ಎಂದಿನಂತೆ ತೆರೆಯಲಿದೆ. ನಾಳೆಯ ಪರಿಸ್ಥಿತಿ ನೋಡಿ ಮುಂದಿನ ನಿರ್ಧಾರ ಕೈಗೊಳ್ಳುವ ಸಂಭವವಿದೆ.

ಇತ್ತ ಬೆಂಗಳೂರಿಗರಿಗೆ  ಬಂದ್ ಎಫೆಕ್ಟ್ ಆಗುವ ಸಾಧ್ಯತೆಯಿಲ್ಲ. ಬೆಂಗಳೂರಿನ ಆರ್.ಆರ್.ನಗರ ವಿಧಾನಸಭಾ ನಾಳೆ ಮತದಾನ ನಡೆಯಲಿದೆ. ಹಾಗಾಗಿ ಬೆಂಗಳೂರಿನಲ್ಲಿ ಬಂದ್ ನಡೆಯೋದು ಬಹುತೇಕ ಅನುಮಾನ. ನಾಳೆ ಯಾವುದೇ ಬಂದ್ ಗೆ ಅವಕಾಶ ನೀಡಿಲ್ಲ. ಬೆಂಗಳೂರಿನಲ್ಲಿ ಬಂದ್ ಮಾಡಿದ್ರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಇನ್ನು ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳ ಪರಿಸ್ಥಿತಿ ನೋಡಿ ಹೊಟೇಲ್ ಬಂದ್ ಮಾಡುವಂತೆ ಹೊಟೇಲ್ ಮಾಲೀಕರ ಸಂಘಟನೆ ಸೂಚನೆ ನೀಡಿದೆ. ಫೀಲ್ಮಂ ಚೇಂಬರ್ ಹಾಗೂ ಕಬ್ಬು ಬೆಳೆಗಾರರ ಸಂಘಟನೆ ಬಂದ್ ಗೆ ಬೆಂಬಲ ನೀಡಿಲ್ಲ. ಸಿನಿಮಾ ಕೆಲಸ ಎಂದಿನಂತೆ ನಡೆಯಲಿದೆ. ಸಿಎಂ ಜೊತೆ ಮಾತುಕತೆ ನಡೆಸಿ ನಂತ್ರ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಕಬ್ಬು ಬೆಳೆಗಾರರ ಸಂಘಟನೆ ಹೇಳಿದೆ. ಸರ್ಕಾರಿ ಆಸ್ಪತ್ರೆ,ನಕಚೇರಿಗಳು ಬಾಗಿಲು ತೆರೆಯಲಿದ್ದು, ಹಾಲು, ತರಕಾರಿ ಸೇರಿದಂತೆ ಯಾವುದೇ ಅಗತ್ಯ ವಸ್ತುಗಳಿಗೆ ತೊಂದರೆಯಾಗುವುದಿಲ್ಲ.

ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸಮತ ಸಾಬೀತು ಪಡಿಸುತ್ತಿದ್ದ ವೇಳೆ ಯಡಿಯೂರಪ್ಪ ಸಿಎಂಗೆ ಸವಾಲು ಹಾಕಿದ್ದರು. 24 ಗಂಟೆಯಲ್ಲಿ ರೈತರ ಸಾಲ ಮನ್ನಾ ಮಾಡದೆ ಹೋದಲ್ಲಿ ಸೋಮವಾರ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಕರೆ ನೀಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...