alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕ ಬಜೆಟ್ 2018: ಹೈಲೈಟ್ಸ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ತಮ್ಮ ಸರ್ಕಾರದ ಕೊನೆಯ ಬಜೆಟ್ ಮಂಡನೆ ಮಾಡಿದ್ದು, ಮುಂಬರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದಾರೆ.

ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡಲು ನಿರ್ಧರಿಸಲಾಗಿದ್ದು, 19.60 ಲಕ್ಷ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲಿದ್ದಾರೆ.

ವೃದ್ದಾಪ್ಯ ವೇತನ, ವಿಧವಾ ವೇತನ, ಮನಸ್ವಿನಿ, ಸಂಧ್ಯಾ ಸುರಕ್ಷಾ ಪಿಂಚಣಿ ಹೆಚ್ಚಳ.

10 ಡಬಲ್ ಡೆಕ್ ಬಸ್ ಖರೀದಿಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಸ್ ಗಳು ಪ್ರಮುಖ ನಗರಗಳಲ್ಲಿ ಸಂಚರಿಸಲಿವೆ.

ರೈತರಿಗೆ ಶೇ.3 ರ ಬಡ್ಡಿ ದರದಲ್ಲಿ 10 ಲಕ್ಷ ರೂ. ಗಳವರೆಗೆ ಸಾಲ ನೀಡಲಾಗುವುದು.

ಚಾಮರಾಜನಗರದಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆ.

ಪೌರ ಕಾರ್ಮಿಕರಿಗೆ ವಸತಿ ಭಾಗ್ಯ ಯೋಜನೆ.

ರಾಜ್ಯದಾದ್ಯಂತ ಎಲ್ಲಾ ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪನೆ.

ಮದ್ಯದ ಮೇಲಿನ ಅಬಕಾರಿ ಸುಂಕ ಶೇ. 8 ರಷ್ಟು ಹೆಚ್ಚಳ.

ತಿರುಮಲದಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಅತಿಥಿ ಗೃಹ ನಿರ್ಮಾಣ.

5 ಕೋಟಿ ರೂ. ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಾಣಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.

ಎಲ್ಲಾ ಸಾರ್ವಜನಿಕ ಕಟ್ಟಡಗಳಲ್ಲಿ ಮಹಿಳಾ ಶೌಚಾಲಯ ನಿರ್ಮಾಣಕ್ಕೆ ಕ್ರಮ.

ಚಿಕ್ಕಮಗಳೂರಿನಲ್ಲಿ ಕುವೆಂಪು ವಿವಿ ಸ್ನಾತಕೋತ್ತರ ಕೇಂದ್ರ ಸ್ಥಾಪನೆ.

100 ವರ್ಷ ಪೂರೈಸಿದ ಶಾಲೆಗಳ ನವೀಕರಣಕ್ಕೆ ಕ್ರಮ.

ಬೆಂಗಳೂರಿನ ಬಹು ಮಹಡಿ ಕಟ್ಟಡದ ಬಳಿ ಕಾರ್ ಪಾರ್ಕಿಂಗ್.

ಗ್ರಾಮೀಣ ಜನರ ಆರೋಗ್ಯ ಸುಧಾರಣೆಗೆ ಕ್ರಮ.

ರುದ್ರಭೂಮಿಗಳ ಅಗತ್ಯ ಭೂಮಿ ಖರೀದಿಗೆ ಹಣ ಮೀಸಲು.

325 ಬಸ್ ನಿಲ್ದಾಣಗಳು ಮೇಲ್ದರ್ಜೆಗೆ.

ಬೆಂಗಳೂರಿನ 1000 ಬಸ್ ಗಳಲ್ಲಿ ಸಿಸಿ ಟಿವಿ ಅಳವಡಿಕೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...