alex Certify
ಕನ್ನಡ ದುನಿಯಾ       Mobile App
       

Kannada Duniya

ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದಿಷ್ಟು….

edu

ಈ ಬಾರಿಯ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಸಾಕಷ್ಟು ಕೊಡುಗೆ ನೀಡಿದ್ದಾರೆ. ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ಕರ್ನಾಟಕ ಶಾಲಾ ಶಿಕ್ಷಣ ನೀತಿ ಜಾರಿಗೆ ಯೋಜನೆ ರೂಪಿಸಿದ್ದಾರೆ.

1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ವಿತರಿಸಲು ಸರ್ಕಾರ ಮುಂದಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಮತ್ತು ಅನುದಾನಿತ ಕಾಲೇಜುಗಳ ವಿದ್ಯಾರ್ಥಿಗಳಿಗೆ ಇದರ ಲಾಭ ಸಿಗಲಿದೆ. ವೈದ್ಯಕೀಯ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಲಾಗುತ್ತದೆ.

ಒಂದನೇ ತರಗತಿಯಿಂದ್ಲೇ ಇಂಗ್ಲೀಷ್ ಪಠ್ಯ ಬೋಧನೆ ಆರಂಭಿಸಲು ನಿರ್ಧರಿಸಲಾಗಿದ್ದು, 8-10ನೇ ತರಗತಿಯ ಹೆಣ್ಣು ಮಕ್ಕಳಿಗೆ ಚೂಡಿದಾರ್ ಸಮವಸ್ತ್ರ ವಿತರಿಸಲಾಗುತ್ತದೆ. ರಾಯಚೂರಿನಲ್ಲಿ ಹೊಸ ವಿವಿ ಸ್ಥಾಪನೆ ಮಾಡಲಾಗುವುದು. 1626 ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೂ ಸರ್ಕಾರ ಮುಂದಾಗಿದೆ. 2 ಹಂತದಲ್ಲಿ 1191 ಪಿಯು ಉಪನ್ಯಾಸಕರ ನೇಮಕಕ್ಕೂ ಕ್ರಮ ಕೈಗೊಳ್ಳಲಿದೆ. ಹೊಸದಾಗಿ 176 ಸಂಯೋಜಿತ ಕಾಲೇಜುಗಳ ಸ್ಥಾಪನೆಗೆ ಬಜೆಟ್ ನಲ್ಲಿ ಯೋಜನೆ ರೂಪಿಸಲಾಗಿದೆ. ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ಗೆ 25 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...