alex Certify
ಕನ್ನಡ ದುನಿಯಾ       Mobile App
       

Kannada Duniya

ಕುಮಾರಸ್ವಾಮಿಯವರ ಬಜೆಟ್ ನಲ್ಲಿ ಸಿದ್ದರಾಮಯ್ಯಗೆ ಕಾದಿದೆಯಾ ಶಾಕ್?

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರದ ಚೊಚ್ಚಲ ಬಜೆಟ್ ಇಂದು ಮಂಡನೆಯಾಗಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿಯವರು ತಮ್ಮ ಬಜೆಟ್ ನಲ್ಲಿ ಯಾವ್ಯಾವ ಹೊಸ ಘೋಷಣೆಗಳನ್ನು ಮಾಡಲಿದ್ದಾರೆಂಬುದು ಕುತೂಹಲ ಕೆರಳಿಸಿದೆ.

ನಿರೀಕ್ಷಿಸಿದಂತೆ ರಾಜ್ಯದ ರೈತರ ಸಾಲ ಮನ್ನಾ ಮಾಡುವುದು ಬಹುತೇಕ ಖಚಿತವಾಗಿದ್ದು, ಎಷ್ಟು ಪ್ರಮಾಣದ ಸಾಲ ಮನ್ನಾ ಆಗಲಿದೆ ಎಂಬ ಸಂಗತಿ ಬಜೆಟ್ ಮಂಡನೆ ಬಳಿಕ ಗೊತ್ತಾಗಲಿದೆ.

ಜೆಡಿಎಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಾಲ ಮನ್ನಾ ಮಾಡುವ ಒತ್ತಡಕ್ಕೆ ಸಿಲುಕಿದ್ದು, ಇದಕ್ಕಾಗಿ ಹಣಕಾಸು ಕ್ರೋಡೀಕರಣ ಮಾಡುವ ಅನಿವಾರ್ಯತೆ ಎದುರಾಗಿದೆ.

ಹೀಗಾಗಿ ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರ ಜಾರಿಗೊಳಿಸಿದ್ದ ಹಲವು ಜನಪ್ರಿಯ ಕಾರ್ಯಕ್ರಮಗಳಿಗೆ ಕೊಕ್ ನೀಡಲಾಗುವುದು ಎಂಬ ಮಾತುಗಳು ಕೇಳಿ ಬರುತ್ತಿದ್ದು, ಇದಕ್ಕೆ ಸಿದ್ದರಾಮಯ್ಯನವರ ಪ್ರತಿಕ್ರಿಯೆ ಏನಿರುತ್ತದೆಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...