alex Certify
ಕನ್ನಡ ದುನಿಯಾ       Mobile App
       

Kannada Duniya

ಬಜೆಟ್ನಲ್ಲಿ ಬೆಂಗಳೂರಿಗಿಲ್ಲ ಬಂಪರ್..!

bangalore-642x428

ಈ ಬಾರಿಯ ಬಜೆಟ್ನಲ್ಲಿ ಬೆಂಗಳೂರಿಗೆ ಸಿಂಹಪಾಲು ಸಿಕ್ಕಿಲ್ಲ. ಟ್ರಾಫಿಕ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸರ್ಕಾರ ಹೆಚ್ಚಿನ ಗಮನ ಹರಿಸಿಲ್ಲ. ನಮ್ಮ ಮೆಟ್ರೋ ಹೆಚ್ಚುವರಿ ಮಾರ್ಗ ನಿರ್ಮಾಣಕ್ಕೆ ಯೋಜಿಸಲಾಗಿದ್ದು, 4200 ಕೋಟಿ ವೆಚ್ಚ ಮಾಡಲಾಗುತ್ತದೆ. ಈ ಮಾರ್ಗ ಸಿಲ್ಕ್ ಬೋರ್ಡ್ ನಿಂದ ಕೆ.ಆರ್.ಪುರಂ ಜಂಕ್ಷನ್ ವರೆಗೆ ನಿರ್ಮಾಣವಾಗಲಿದೆ.

ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆಗೆ 345 ಕೋಟಿ ಮೀಸಲಿಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 43 ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 690 ಕೋಟಿ ವೆಚ್ಚದಲ್ಲಿ ರಸ್ತೆಗಳನ್ನು ಮೇಲ್ದರ್ಜೆಗೆ  ಏರಿಸಲಾಗುತ್ತದೆ. ಟೆಂಡರ್ ಶ್ಯೂರ್ ಮಾದರಿಯಲ್ಲಿ 25 ಕಿಮೀ ರಸ್ತೆ ಅಭಿವೃದ್ಧಿ ಮಾಡಲಾಗುತ್ತದೆ.

ಸಂಚಾರ ದಟ್ಟಣೆಯುಳ್ಳ 12 ಕಾರಿಡಾರ್ ಅಭಿವೃದ್ಧಿಗೂ ಬಜೆಟ್ ನಲ್ಲಿ ಪ್ರಸ್ತಾಪಿಸಲಾಗಿದೆ.  ಹೆಬ್ಬಾಳ ಜಂಕ್ಷನ್ ನಲ್ಲಿ ಅಂಡರ್ ಪಾಸ್ ನಿರ್ಮಾಣ ಮಾಡಲಾಗುವುದು. ಮೇಲ್ಸೇತುವೆ ಅಗಲೀಕರಣಕ್ಕೆ 88 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಪರಿಸರ ಸಂರಕ್ಷಣೆಗಾಗಿ ಬೆಂಗಳೂರಿನ ಆಯ್ದ ಭಾಗಗಳಲ್ಲಿ ಬಾಡಿಗೆ ಸೈಕಲ್ ವ್ಯವಸ್ಥೆ ಮಾಡಲಾಗುವುದು. ಬೆಂಗಳೂರಿನಲ್ಲಿ 10 ಕೆರೆಗಳ ಸಮಗ್ರ ಅಭಿವೃದ್ಧಿಗೆ 42 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಬೆಂಗಳೂರು ನಗರದ ವಾಹನ ದಟ್ಟಣೆ ನಿಯಂತ್ರಿಸಲು 1455 ಕೋಟಿ ವೆಚ್ಚದಲ್ಲಿ ರಸ್ತೆಗಳ ಅಭಿವೃದ್ಧಿ ಮಾಡಲಾಗುವುದು ಅಂತಾ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಪ್ರಕಟಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...