alex Certify
ಕನ್ನಡ ದುನಿಯಾ       Mobile App
       

Kannada Duniya

ಉಪ ಚುನಾವಣೆ: ಬಿಜೆಪಿಗೆ 2 ಕಾಂಗ್ರೆಸ್ ಗೆ 1 ಸ್ಥಾನ

bjp-congress1

ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಇಂದು ಹೊರ ಬಿದ್ದಿದ್ದು, ಬಿಜೆಪಿ ಎರಡು ಹಾಗೂ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಜಯ ಗಳಿಸಿವೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಭ್ಯರ್ಥಿಯನ್ನು ಕಡೆ ಕ್ಷಣದಲ್ಲಿ ಕಡೆಗಣಿಸಿ ಮಾಜಿ ಕೇಂದ್ರ ಸಚಿವ ಜಾಫರ್ ಷರೀಫ್ ಅವರ ಮೊಮ್ಮಗ ರೆಹಮಾನ್ ಷರೀಫ್ ಅವರಿಗೆ ಕಾಂಗ್ರೆಸ್ ವರಿಷ್ಟರು ಟಿಕೇಟ್ ನೀಡಿದ್ದ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯ ವೈ.ಎ. ನಾರಾಯಣ ಸ್ವಾಮಿ ವಿಜಯಶಾಲಿಯಾಗಿದ್ದಾರೆ.

ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿಯ ಶಿವನಗೌಡ ನಾಯಕ್ ಭರ್ಜರಿ ಜಯ ಸಾಧಿಸಿದ್ದು, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ನ ರಾಜಶೇಖರ್ ನಾಯಕ್ ಅವರನ್ನು ಪರಾಭವಗೊಳಿಸಿದ್ದಾರೆ. ಬೀದರ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ನ ರಹೀಂ ಖಾನ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಪ್ರಕಾಶ್ ಖಂಡ್ರೆಯವರನ್ನು ಸೋಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...