alex Certify
ಕನ್ನಡ ದುನಿಯಾ       Mobile App
       

Kannada Duniya

ಸಚಿವಾಕಾಂಕ್ಷಿಗಳ ಮನವೊಲಿಕೆಗೆ ಕಸರತ್ತು: ಯಶಸ್ವಿಯಾಗುವರೇ ಕೈ ನಾಯಕರು…?

ಬೆಂಗಳೂರು: ಸಚಿವಾಕಾಂಕ್ಷಿಗಳ ಶಾಸಕರ ಪಟ್ಟು ಸಮ್ಮಿಶ್ರ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಮುಖ್ಯವಾಗಿ ಕಾಂಗ್ರೆಸ್ ನ ಅತೃಪ್ತ ಶಾಸಕರು ನಾಯಕತ್ವದ ವಿರುದ್ಧವೇ ತೊಡೆತಟ್ಟಲು ಮುಂದಾಗಿದ್ದು, ಮೈತ್ರಿ ಸರ್ಕಾರಕ್ಕೆ ಉರುಳಾಗುವ ಭೀತಿ ಎದುರಾಗಿದೆ.

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡರಾದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಸಚಿವ ಡಿ.ಕೆ. ಶಿವಕುಮಾರ್, ಕೈ ಶಾಸಕರ ಮನವೊಲಿಕೆ ಯತ್ನ ನಡೆಸಿದ್ದಾರೆನ್ನಲಾಗಿದೆ.

ಸಚಿವ ಸಂಪುಟ ವಿಸ್ತರಣೆ ಹಾಗೂ ಉಳಿದ 6 ಸಚಿವ ಸ್ಥಾನಗಳ ಹಂಚಿಕೆ ಕಾಂಗ್ರೆಸ್ ನಾಯಕರಿಗೆ ಸವಾಲಾಗಿ ಪರಿಣಮಿಸಿದ್ದು, ಸಚಿವಾಕಾಂಕ್ಷಿಗಳು ಇಡುತ್ತಿರುವ ಬೇಡಿಕೆಗೆ ಕೈನಾಯಕರು ಕಂಗಾಲಾಗಿದ್ದಾರೆ.

ಕಾಂಗ್ರೆಸ್ ಶಾಸಕರಾದ ಡಾ.ಸುಧಾಕರ್, ಸಂಗಮೇಶ್, ಎಂಟಿಬಿ ನಾಗರಾಜ್, ಬಿ.ಸಿ. ಪಾಟೀಲ್, ಎಸ್.ಟಿ. ಸೋಮಶೇಖರ್, ಭೈರತಿ ಬಸವರಾಜ್ ಮೊದಲಾದ ನಾಯಕರು ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಒಂದೊಮ್ಮೆ ಮಂತ್ರಿ ಸ್ಥಾನ ಕೈತಪ್ಪಿದರೆ ತಮ್ಮ ಮುಂದಿನ ನಡೆ ಎದುರಿಸಬೇಕಾಗುತ್ತದೆ ಎಂದು ಬಹಿರಂಗ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗುತ್ತಿದೆ. ಆಕಾಂಕ್ಷಿಗಳ ಮನವೊಲಿಕೆಗೆ ಯತ್ನಿಸಿರುವ ಕಾಂಗ್ರೆಸ್ ನ ಮೂವರು ನಾಯಕರು ತಾಳ್ಮೆ ಕಳೆದುಕೊಳ್ಳದಂತೆ ಮನವಿ ಮಾಡುತ್ತಿದ್ದು, ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವ ಭರವಸೆ ನೀಡುತ್ತಿದ್ದಾರೆ.

ಸದ್ಯ ಖಾಲಿ ಇರುವ ಆರು ಸಚಿವ ಸ್ಥಾನಗಳಲ್ಲಿ ನಾಲ್ಕನ್ನು ಭರ್ತಿ ಮಾಡಲು ನಿರ್ಧರಿಸಲಾಗಿದ್ದು, ಉಳಿದ ಎರಡು ಸ್ಥಾನಗಳನ್ನು ಹಾಗೆಯೇ ಉಳಿಸಿಕೊಳ್ಳಲು ಕಾಂಗ್ರೆಸ್ ತೀರ್ಮಾನಿಸಿದೆ ಎನ್ನಲಾಗಿದೆ. ಆದರೆ ಸಚಿವ ಸ್ಥಾನಕ್ಕಾಗಿ ಪೈಪೋಟಿ ನಡೆಸುತ್ತಿರುವ ಆಕಾಂಕ್ಷಿಗಳಿಗೆ ಸಮಾಧಾನಪಡಿಸಲು ನಾಯಕರು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...