alex Certify
ಕನ್ನಡ ದುನಿಯಾ       Mobile App
       

Kannada Duniya

ತಂದೆಯ ನಿವೃತ್ತಿ ನಂತರ ರಾಜಕೀಯ ಪ್ರವೇಶಿಸುವುದಾಗಿ ಹೇಳಿದ್ರು ರಾಕೇಶ್

Karnataka Chief Minister Siddaramaiah's son passes awayರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಉತ್ತರಾಧಿಕಾರಿಯೆಂದೇ ಬಿಂಬಿತರಾಗಿದ್ದ ರಾಕೇಶ್ ಸಿದ್ದರಾಮಯ್ಯ ಶನಿವಾರ ವಿಧಿವಶರಾಗಿದ್ದಾರೆ. ಸ್ನೇಹಿತರ ಜೊತೆ ಬೆಲ್ಜಿಯಂ ಪ್ರವಾಸಕ್ಕೆ ತೆರಳಿದ್ದ ಅವರು, ಅಲ್ಲಿಯೇ ಅನಾರೋಗ್ಯಕ್ಕೊಳಗಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಮಗನನ್ನು ನೋಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕುಟುಂಬ ಸದಸ್ಯರೆಲ್ಲರೂ ಬೆಲ್ಜಿಯಂಗೆ ತೆರಳಿದ್ದು, ರಾಕೇಶ್, ಅಕಾಲಿಕ ನಿಧನದಿಂದಾಗಿ ತೀವ್ರ ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಪಾರ್ಥಿವ ಶರೀರವನ್ನು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ತರಲಾಗುವುದೆಂದು ಹೇಳಲಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಈ ಕುರಿತು ಬೆಲ್ಜಿಯಂನಲ್ಲಿರುವ ಭಾರತೀಯ ರಾಯಭಾರಿ ಕಛೇರಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆಂದು ತಿಳಿದುಬಂದಿದೆ.

ಕೆಲ ದಿನಗಳ ಹಿಂದಷ್ಟೇ ತಮ್ಮ ಹುಟ್ಟು ಹಬ್ಬ ಆಚರಿಸಿಕೊಂಡಿದ್ದ ರಾಕೇಶ್ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ತಂದೆಯವರು ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕವಷ್ಟೇ ತಾವು ರಾಜಕೀಯ ಪ್ರವೇಶಿಸುವುದಾಗಿ ಹೇಳಿಕೊಂಡಿದ್ದರು. ತಂದೆಯವರೇ ತಮಗೆ ಗುರುವಾಗಿದ್ದು, ಅವರ ಅಣತಿಯಂತೆ ನಡೆಯುತ್ತೇನೆ ಎಂದಿದ್ದ ರಾಕೇಶ್ ಸಿದ್ದರಾಮಯ್ಯ, ತಂದೆಯವರ ಅಧಿಕಾರಾವಧಿಯಲ್ಲಿ ಬಡವರು, ದಲಿತರ ಕಲ್ಯಾಣಕ್ಕೆ ಶ್ರಮಿಸುವುದಾಗಿ ತಿಳಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...