alex Certify
ಕನ್ನಡ ದುನಿಯಾ       Mobile App
       

Kannada Duniya

ಸೇವಾವಧಿ ವಿಸ್ತರಣೆ ಬಯಸಿದ್ದ ಮುಖ್ಯ ಕಾರ್ಯದರ್ಶಿಗೆ ಶಾಕ್

ತಮ್ಮ ಸೇವಾ ಅವಧಿಯನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಣೆ ಮಾಡಬೇಕೆಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಮನವಿ ಮಾಡಿಕೊಂಡಿದ್ದಾರೆಂಬ ವರದಿಗಳ ಬೆನ್ನಲ್ಲೇ ಶಾಕಿಂಗ್ ಸುದ್ದಿ ಹೊರಬಿದ್ದಿದೆ.

ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ತಮ್ಮ ಅಧಿಕಾರಾವಧಿಯಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರ ನಡೆಸಿದ್ದಾರೆ ಎಂದು ಉದ್ಯೋಗ ತರಬೇತಿ ಇಲಾಖೆಯ ಮಾಜಿ ನೌಕರ ಶಂಕರ್ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ಸಲ್ಲಿಸಿದ್ದಾರೆಂದು ಹೇಳಲಾಗಿದೆ.

ರತ್ನಪ್ರಭಾ ವಿರುದ್ಧದ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಶಂಕರ್, ತಮ್ಮ ದೂರಿನಲ್ಲಿ ಒತ್ತಾಯಿಸಿದ್ದು, ಉದ್ಯೋಗ ಮತ್ತು ತರಬೇತಿ ಇಲಾಖೆಯ 62 ಮಂದಿ ನೌಕರರಿಗೆ ಹಿಂಬಡ್ತಿ ನೀಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ ರತ್ನಪ್ರಭಾ ಅದನ್ನು ತಡೆ ಹಿಡಿದಿದ್ದರೆಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...