alex Certify
ಕನ್ನಡ ದುನಿಯಾ       Mobile App
       

Kannada Duniya

‘ಮೇಕೆದಾಟು’ ಯೋಜನೆ ವಿಚಾರವಾಗಿ ಒಗ್ಗಟ್ಟು ಪ್ರದರ್ಶಿಸಲು ಸಂಸದರಿಗೆ ಸಿಎಂ ಮನವಿ

ಬೆಂಗಳೂರು: ಮೇಕೆದಾಟು ಯೋಜನೆ ವಿಚಾರವಾಗಿ ವಿರೋಧ ವ್ಯಕ್ತಪಡಿಸುತ್ತಿರುವ ತಮಿಳುನಾಡಿನ ನಿಲುವನ್ನು ಮುಂಬರುವ ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಒಗ್ಗಟ್ಟಿನಿಂದ ಎದುರಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯದ ಸಂಸದರಲ್ಲಿ ಮನವಿ ಮಾಡಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ರಾಜ್ಯ ಸಂಸದರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯೋಜನೆಯ ಎಲ್ಲಾ ಮಾಹಿತಿಯನ್ನು ಸಂಸದರಿಗೆ ನೀಡಲಾಗಿದೆ ಎಂದು ತಿಳಿಸಿದರು.

ಇತ್ತೀಚೆಗಷ್ಚೇ ಈ ಯೋಜನೆಯ ವಿಸ್ಕೃತ ವರದಿ ತಯಾರಿಸಿ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ತಿಳಿಸಿತ್ತು. ಇದರಿಂದಾಗಿ ರಾಜ್ಯದ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಾರಂಭಿಕ ಯಶಸ್ಸು ಸಿಕ್ಕಂತಾಗಿತ್ತು. ಆದರೆ ತಮಿಳುನಾಡು ಸರ್ಕಾರ ಕೇಂದ್ರದ ಈ ನಿರ್ಧಾರವನ್ನು ಬಲವಾಗಿ ವಿರೋಧಿಸಿದ್ದು, ಹಿಂಪಡೆಯುವಂತೆ ಒತ್ತಡ ಹೇರಿದೆ. ಹೀಗಾಗಿ ರಾಜ್ಯದ ಸಂಸದರು ರಾಜಕೀಯ ಭಿನ್ನಾಭಿಪ್ರಾಯಗಳೇನೇ ಇದ್ದರೂ ಅದನ್ನು ಮರೆತು ರಾಜ್ಯದ ಹಿತಕ್ಕೋಸ್ಕರ ಮೇಕೆದಾಟು ವಿಚಾರವಾಗಿ ಒಕ್ಕೊರಲಿನಿಂದ ಬೆಂಬಲಿಸಬೇಕು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ, ಕಾವೇರಿ ನದಿಗೆ ಮೇಕೆದಾಟುವಿನಲ್ಲಿ ಅಣೆಕಟ್ಟು ಕಟ್ಟಿ ಕನಕಪುರ, ರಾಮನಗರ ಜಿಲ್ಲೆಗಳಿಗೆ ನೀರು ಒದಗಿಸುವ 5912 ಕೋಟಿ ರೂ. ಅಂದಾಜು ವೆಚ್ಚದ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ನಿರ್ಧರಿಸಿತ್ತು. ಆದರೆ ತಮಿಳುನಾಡು ಕ್ಯಾತೆಯಿಂದಾಗಿ ವಿಳಂಬವಾಗುತ್ತಿದೆ. ಆದರೆ ಇದೀಗ ಯೋಜನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿಸಿರುವುದರಿಂದ ಕರ್ನಾಟಕಕ್ಕೆ ಪ್ರಾರಂಭಿಕ ಗೆಲುವು ಸಿಕ್ಕಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...