alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರ ರಚನೆಗೂ ಮುನ್ನ ಕುಮಾರಸ್ವಾಮಿಗೆ ಶುರುವಾಗಿದೆ ಸಂಕಷ್ಟ

ಮೈತ್ರಿ ಸರ್ಕಾರ ರಚನೆಗೂ ಮುನ್ನವೇ ಸಚಿವ ಸಂಪುಟ ರಚನೆ ಸಂಕಷ್ಟ ಶುರುವಾಗಿದೆ. ಡಿಸಿಎಂ ಹುದ್ದೆ ಗಲಾಟೆ ಕಾಂಗ್ರೆಸ್ ನಲ್ಲಿ ಮುಂದುವರೆದಿದೆ. ಲಿಂಗಾಯಿತರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆಲವರು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. 2 ಡಿಸಿಎಂ ಹುದ್ದೆ ಸೃಷ್ಟಿಯ ಬಗ್ಗೆ ಚಿಂತನೆ ನಡೆಸಲಾಗ್ತಿದೆ.

ಪರಮೇಶ್ವರ್ ಗೆ ಉಪಮುಖ್ಯಮಂತ್ರಿ ಸ್ಥಾನ ಎಂಬುದು ಬಹುತೇಕ ಖಚಿತವಾಗಿದೆ. ಆದ್ರೆ ಮುಸ್ಲಿಂ ಶಾಸಕರಿಗೆ ಸ್ಥಾನ ನೀಡಬೇಕು ಎಂಬ ಕೂಗು ಒಂದೆಡೆಯಾದ್ರೆ ಲಿಂಗಾಯತರಿಗೆ ನೀಡಬೇಕೆಂಬ ಕೂಗು ಇನ್ನೊಂದೆಡೆ ಕೇಳಿ ಬಂದಿದೆ. ವೀರಶೈವ ಮಹಾಸಭಾದ ಮುಖ್ಯಸ್ಥ ತಿಪ್ಪಣ್ಣ, ಕಾಂಗ್ರೆಸ್ ನಾಯಕರಿಗೆ ಪತ್ರ ಬರೆದಿದ್ದಾರೆ. ಶಾಮನೂರು ಶಿವಶಂಕರಪ್ಪನವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂಬ ಬೇಡಿಕೆಯಿಟ್ಟಿದ್ದಾರೆ.

ಇಂದು ದೆಹಲಿಗೆ ಕುಮಾರಸ್ವಾಮಿ ಭೇಟಿ ನೀಡಲಿದ್ದಾರೆ. ಅಲ್ಲಿ ಹಿರಿಯ ನಾಯಕರ ಜೊತೆ ಚರ್ಚೆ ನಡೆಸಲಿದ್ದಾರೆ. ಯಾರಿಗೆ ಡಿಸಿಎಂ ಹುದ್ದೆ ನೀಡಬೇಕು?ಸಚಿವ ಸಂಪುಟದಲ್ಲಿ ಯಾರೆಲ್ಲ ಇರಬೇಕು ಎನ್ನುವ ಬಗ್ಗೆಯೂ ಕುಮಾರಸ್ವಾಮಿ ಮಾತುಕತೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...