alex Certify
ಕನ್ನಡ ದುನಿಯಾ       Mobile App
       

Kannada Duniya

ಮೋಹನ್ ಭಾಗ್ವತ್ ಪರ ಜಾಫರ್ ಷರೀಫ್ ಬ್ಯಾಟಿಂಗ್

mohan-bhagwatರಾಷ್ಟ್ರಪತಿ ಹುದ್ದೆಗೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗ್ವತ್ ರ ಹೆಸರನ್ನು ಕೇಂದ್ರ ಸರ್ಕಾರ ಸೂಚಿಸಿದರೆ ಇದಕ್ಕೆ ತನ್ನ ಸಹಮತವಿಲ್ಲವೆಂದು ಕಾಂಗ್ರೆಸ್ ಹೇಳಿರುವ ಮಧ್ಯೆ ಹಿರಿಯ ಕಾಂಗ್ರೆಸ್ಸಿಗರೊಬ್ಬರು ಇದಕ್ಕೆ ವ್ಯತಿರಿಕ್ತ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮಾಜಿ ರೈಲ್ವೇ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಜಾಫರ್ ಷರೀಫ್, ಮೋಹನ್ ಭಾಗ್ವತ್ ರಾಷ್ಟ್ರಪತಿಯಾಗಲು ಸಮರ್ಥ ವ್ಯಕ್ತಿ ಎಂದು ಹೇಳಿದ್ದಾರಲ್ಲದೇ ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರಿಗೂ ಪತ್ರ ಬರೆದಿದ್ದಾರೆ.

ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಅಧಿಕಾರಾವಧಿ ಜುಲೈ 24 ರಂದು ಅಂತ್ಯಗೊಳ್ಳಲಿದ್ದು, ನೂತನ ರಾಷ್ಟ್ರಪತಿ ಆಯ್ಕೆಗಾಗಿ ಈಗ ಸಮಾಲೋಚನೆ ನಡೆಯುತ್ತಿದೆ. ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾನಿ, ಮೋಹನ್ ಭಾಗ್ವತ್ ಸೇರಿದಂತೆ ಹಲವರ ಹೆಸರು ಮುಂಚೂಣಿಯಲ್ಲಿದ್ದು, ಯಾರು ಆಯ್ಕೆಯಾಗಲಿದ್ದಾರೆಂಬುದು ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...