alex Certify
ಕನ್ನಡ ದುನಿಯಾ       Mobile App
       

Kannada Duniya

BJP ಗೆ 110: ಕರ್ನಾಟಕದಲ್ಲೂ ಮೋಡಿ ಮಾಡಿದ ಮೋದಿ, ಅಮಿತ್ ಶಾ ಜೋಡಿ

ದೇಶದ ಗಮನಸೆಳೆದಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು, 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿ.ಜೆ.ಪಿ. ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಕಳೆದ ಲೋಕಸಭೆ ಚುನಾವಣೆ ಬಳಿಕ ದೇಶದ ಅನೇಕ ರಾಜ್ಯಗಳಲ್ಲಿ ಅಧಿಕಾರದಲ್ಲಿರುವ ಬಿ.ಜೆ.ಪಿ.ಗೆ ದಕ್ಷಿಣ ಭಾರತದಲ್ಲಿ ಆಡಳಿತಕ್ಕೆ ಬರಲು ಇರುವ ಏಕೈಕ ರಾಜ್ಯ ಕರ್ನಾಟಕವಾಗಿತ್ತು. ಈ ಚುನಾವಣೆಯ ಗೆಲುವು ಬಿ.ಜೆಪಿ. ನಾಯಕರಿಗೆ ಮಹತ್ವದ್ದಾಗಿತ್ತು.

ಮಿಷನ್ 150 ಗುರಿಯೊಂದಿಗೆ ಚುನಾವಣೆ ಕಾರ್ಯತಂತ್ರ ರೂಪಿಸಿದ್ದ ಬಿ.ಜೆ.ಪಿ. ಮೋದಿ, ಅಮಿತ್ ಶಾ ಅವರ ಕಾರ್ಯತಂತ್ರ ವರ್ಕೌಟ್ ಆಗಿದೆ. ಬಿ.ಜೆ.ಪಿ. 110 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಸರಳ ಬಹುಮತದತ್ತ ದಾಪುಗಾಲಿಟ್ಟಿದೆ.

ಇನ್ನೂ ಪೂರ್ಣ ಫಲಿತಾಂಶ ಪ್ರಕಟವಾಗಿಲ್ಲ. ಮತ ಎಣಿಕೆ ಕಾರ್ಯ ನಡೆಯುತ್ತಿದೆ. ಬಿ.ಜೆ.ಪಿ. 110, ಕಾಂಗ್ರೆಸ್ 68, ಜೆ.ಡಿ.ಎಸ್. 42, ಇತರರು 2 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದು, ಈ ಸ್ಥಾನಗಳಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...