alex Certify
ಕನ್ನಡ ದುನಿಯಾ       Mobile App
       

Kannada Duniya

ರಂಗೇರಿದ ಚುನಾವಣೆ, ಮುಗಿಲು ಮುಟ್ಟಿದ ಪ್ರಚಾರದ ಭರಾಟೆ

ಬಿಸಿಲ ಬೇಗೆಯೊಂದಿಗೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕಾವು ಏರತೊಡಗಿದೆ. ರಾಜ್ಯದ ಪ್ರಮುಖ ನಾಯಕರು, ರಾಷ್ಟ್ರೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಡುವಿಲ್ಲದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದು, ಮಠ, ಮಂದಿರಗಳಿಗೂ ಭೇಟಿ ನೀಡುತ್ತಿದ್ದಾರೆ. ಹಳ್ಳಿ, ಹಳ್ಳಿಗಳಲ್ಲಿಯೂ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ.

ಈಗಾಗಲೇ ಅನೇಕ ಕ್ಷೇತ್ರಗಳ ಅಭ್ಯರ್ಥಿಗಳು ಯಾರೆಂಬುದು ಫೈನಲ್ ಆಗಿದೆ. ಟಿಕೆಟ್ ಫೈನಲ್ ಆದ ಅಭ್ಯರ್ಥಿಗಳು ಪ್ರಚಾರ ಆರಂಭಿಸಿದ್ದಾರೆ. ಆಕಾಂಕ್ಷಿಗಳು ಕೂಡ ಟಿಕೆಟ್ ಸಿಗುವ ವಿಶ್ವಾಸದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ.

ಎ.ಐ.ಸಿ.ಸಿ. ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಈಗಾಗಲೇ ಹಲವು ಹಂತದಲ್ಲಿ ಪ್ರಚಾರ ನಡೆಸಿದ್ದು, ಏಪ್ರಿಲ್ 3 ರಿಂದ ಮತ್ತೊಂದು ಸುತ್ತಿನ ಪ್ರಚಾರಕ್ಕೆ ಆಗಮಿಸಲಿದ್ದಾರೆ. ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪ್ರಚಾರ ನಡೆಸಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದ್ದಾರೆ.

ಇನ್ನು ರಾಜ್ಯ ನಾಯಕರೂ ಕೂಡ ಬಿಡುವಿಲ್ಲದೇ ಪ್ರಚಾರದಲ್ಲಿ ತೊಡಗಿದ್ದಾರೆ. ಜೆ.ಡಿ.ಎಸ್. ವರಿಷ್ಠ ಹೆಚ್.ಡಿ. ದೇವೇಗೌಡರು, ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡುವಿಲ್ಲದೇ ಬಿರುಸಿನ ಪ್ರಚಾರ ನಡೆಸಿದ್ದಾರೆ. 3 ಪಕ್ಷಗಳ ನಾಯಕರಿಂದ ಬಿರುಗಾಳಿ ಪ್ರಚಾರ ನಡೆಯುತ್ತಿದೆ.

ಚುನಾವಣೆ ದಿನ ಸಮೀಪಿಸುತ್ತಿರುವಂತೆಯೇ ರಾಜ್ಯದಲ್ಲಿ ಹಣ, ಮದ್ಯದ ಹೊಳೆ ಹರಿಯತೊಡಗಿದೆ. ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ಈಗಾಗಲೇ ಅನೇಕ ಕಡೆಗಳಲ್ಲಿ ನಗದು, ಮದ್ಯವನ್ನು ಜಪ್ತಿ ಮಾಡಲಾಗಿದೆ. ನೀತಿ ಸಂಹಿತೆ ಕಟ್ಟುನಿಟ್ಟಿನ ಜಾರಿಗೆ ಆಯೋಗ ಕ್ರಮ ಕೈಗೊಂಡಿದ್ದು, ಹಲವೆಡೆ ದಿಢೀರ್ ದಾಳಿ ನಡೆಸಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...