alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂದಿನ ನಡೆ ಗುಟ್ಟು ಬಿಟ್ಟುಕೊಡದ ಯಡಿಯೂರಪ್ಪ

ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದ ನಂತ್ರ ಮಾಜಿ ಸಿಎಂ ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಯಡಿಯೂರಪ್ಪ ಜನರಿಗೆ ಧನ್ಯವಾದ ಹೇಳಿದ್ರು.

ಕಾಂಗ್ರೆಸ್ ದುರಾಡಳಿತವನ್ನು ಜನರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಮುಕ್ತ ಅಧಿಕಾರಕ್ಕೆ ಜನಾದೇಶ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯರಿಗೆ ಜನತೆ ಬುದ್ಧಿ ಕಲಿಸಿದ್ದಾರೆ. ಮತದಾನದ ಮೂಲಕ ಅವ್ರ ವಿರುದ್ಧ ನಾವಿದ್ದೇವೆ ಎಂಬುದನ್ನು ಹೇಳಿದ್ದಾರೆಂದು ಯಡಿಯೂರಪ್ಪ ಹೇಳಿದ್ದಾರೆ.

ತವರಿನಲ್ಲಿಯೇ ಸಿದ್ಧರಾಮಯ್ಯರಿಗೆ ಮುಖಭಂಗವಾಗಿದೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಸೋತಿದ್ದಾರೆ. ಚುನಾವಣೆಯಲ್ಲಿ ಸೋಲುಂಡರೂ ಕಾಂಗ್ರೆಸ್ ಹಿಂಬಾಗಿಲಿನಿಂದ ಅಧಿಕಾರ ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಕಾಂಗ್ರೆಸ್ ಈ ನಡೆಯನ್ನು ಖಂಡಿಸುತ್ತೇನೆಂದು ಯಡಿಯೂರಪ್ಪ ಹೇಳಿದ್ದಾರೆ.

ಜೆಡಿಎಸ್-ಬಿಜೆಪಿ ಮೈತ್ರಿ ಬಗ್ಗೆ ಈಗ್ಲೂ ಯಾವುದೇ ಹೇಳಿಕೆ ನೀಡದ ಯಡಿಯೂರಪ್ಪ ರಾಷ್ಟ್ರೀಯ ನಾಯಕರ ಜೊತೆ ಚರ್ಚೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...