alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಘೋಷಣೆ ಬಳಿಕ ಸಿ.ಎಂ. ಮತಯಾಚನೆ ಶುರು

ಮೈಸೂರು: ವಿಧಾನಸಭೆ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪಕ್ಷದ ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆಯಲ್ಲಿ ಬ್ಯುಸಿಯಾಗಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದಿನಿಂದ 5 ದಿನಗಳ ಕಾಲ ಮೈಸೂರಿನ ವಿವಿಧ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರೆ.

ತಮ್ಮ ಕ್ಷೇತ್ರ ಚಾಮುಂಡೇಶ್ವರಿ, ಪುತ್ರ ಯತೀಂದ್ರ ಸ್ಪರ್ಧಿಸಲಿರುವ ವರುಣಾ ಸೇರಿದಂತೆ 11 ಕ್ಷೇತ್ರಗಳಲ್ಲಿ ಸಿ.ಎಂ. ಮತಯಾಚನೆ ಮಾಡಲಿದ್ದಾರೆ.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಬಳಿಕ, ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ಅವರು ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಇದೇ ವೇಳೆ ಮೈಸೂರಿನಲ್ಲಿ ಬೀಡುಬಿಟ್ಟಿರುವ ಸಿ.ಎಂ. ಪ್ರಚಾರ ನಡೆಸಲಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದ ರಮ್ಮನಹಳ್ಳಿಯಲ್ಲಿ ಅವರು ಪ್ರಚಾರಕ್ಕೆ ಚಾಲನೆ ನೀಡಲಿದ್ದು, ಚಾಮುಂಡೇಶ್ವರಿ, ವರುಣಾ, ಹೆಚ್.ಡಿ. ಕೋಟೆ, ಟಿ. ನರಸೀಪುರ ಮೊದಲಾದ ಕ್ಷೇತ್ರಗಳಲ್ಲಿ ಅವರು ಪ್ರಚಾರ ನಡೆಸಿ ಮತಯಾಚಿಸಲಿದ್ದಾರೆ. ಸ್ವಕ್ಷೇತ್ರ ಮತ್ತು ಪುತ್ರನ ಕ್ಷೇತ್ರದಲ್ಲಿ ಅವರು ಮತದಾರರ ಮನ ಅರಿಯಲು ಪ್ರಯತ್ನ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...