alex Certify
ಕನ್ನಡ ದುನಿಯಾ       Mobile App
       

Kannada Duniya

ವರುಣಾ ಕ್ಷೇತ್ರದಲ್ಲಿ ಸಿ.ಎಂ., ಮಾಜಿ ಸಿ.ಎಂ. ಪುತ್ರರ ಸ್ಪರ್ಧೆ…?

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವರುಣಾ ಇಲ್ಲವೇ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ವರುಣಾ ಕ್ಷೇತ್ರವನ್ನು ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಟ್ಟು ಚಾಮುಂಡೇಶ್ವರಿ ಕ್ಷೇತ್ರದಿಂದ ಅವರು ಸ್ಪರ್ಧಿಸುವ ಸಾಧ್ಯತೆ ಇದೆ. ವರುಣಾದಲ್ಲಿ ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಬೇಕೆಂದು ಒತ್ತಡ ಹೇರಲಾಗ್ತಿದೆ.

ವರುಣಾ ಕ್ಷೇತ್ರದ ಬಿ.ಜೆ.ಪಿ. ಮುಖಂಡರು, ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಅವರನ್ನು ಕಣಕ್ಕಿಳಿಸಿದಲ್ಲಿ ಗೆಲ್ಲಿಸಿಕೊಂಡು ಬರುವುದಾಗಿ ತಿಳಿಸಿದ್ದಾರೆ. ಇದಕ್ಕೆ ಯಾವುದೇ ಭರವಸೆ ನೀಡದ ಬಿ.ಎಸ್.ವೈ., ಪಕ್ಷದ ವರಿಷ್ಠರೊಂದಿಗೆ ಮಾತನಾಡುವುದಾಗಿ ಹೇಳಿದ್ದಾರೆ.

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ. ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ವರುಣಾದಲ್ಲಿಯೇ ಕಣಕ್ಕಿಳಿದರೂ ಇಳಿಬಹುದಾಗಿದೆ. ಚುನಾವಣೆಯಲ್ಲಿ ಸಿ.ಎಂ. ಅವರನ್ನು ಸೋಲಿಸಲು ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್. ನಾಯಕರು ಕಾರ್ಯತಂತ್ರ ರೂಪಿಸುವ ಸಾಧ್ಯತೆ ಇದೆ.

ಇನ್ನು ಬಿ.ಎಸ್.ವೈ. ಮತ್ತು ಸಿದ್ಧರಾಮಯ್ಯ ಅವರ ಪುತ್ರರು ಸ್ಪರ್ಧಿಸಿದಲ್ಲಿ ವರುಣಾ ಕ್ಷೇತ್ರ ರಾಜ್ಯದ ಗಮನಸೆಳೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...