alex Certify
ಕನ್ನಡ ದುನಿಯಾ       Mobile App
       

Kannada Duniya

ಮಧ್ಯ ರಾತ್ರಿಯ ಕರಾಮತ್ತಿಗೆ ಬೀಳುತ್ತಾ ಕಡಿವಾಣ…?

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನಕ್ಕೆ ಕೆಲವೇ ಗಂಟೆಗಳಷ್ಟೇ ಬಾಕಿ ಉಳಿದಿದೆ. ಬಹಿರಂಗ ಪ್ರಚಾರ ಕೊನೆಗೊಂಡ ಬಳಿಕ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು, ಮದ್ಯ, ಹಣವನ್ನು ಕೆಲ ಕ್ಷೇತ್ರಗಳಲ್ಲಿ ಯಥೇಚ್ಚವಾಗಿ ಹರಿಸಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ರಾಜ್ಯಾದ್ಯಂತ ಚುನಾವಣಾ ಅಧಿಕಾರಿಗಳು ಆಪಾರ ಪ್ರಮಾಣದ ಹಣ, ಮದ್ಯ ವಶಪಡಿಸಿಕೊಂಡಿದ್ದಾರೆ. ಆದರೂ ಇದಕ್ಕೆಲ್ಲಾ ಈ ಮೊದಲೇ ಸಿದ್ದವಾಗಿದ್ದ ಕೆಲ ಅಭ್ಯರ್ಥಿಗಳು ತಮ್ಮ ಗೆಲುವಿಗಾಗಿ ಕೊನೆ ಕ್ಷಣದ ಕಸರತ್ತು ನಡೆಸಿದ್ದು, ಹಣ, ಮದ್ಯ ಹಂಚುತ್ತಿದ್ದಾರೆಂದು ಹೇಳಲಾಗುತ್ತಿದೆ.

ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಧಿಕಾರಕ್ಕೇರಲು ಭಾರೀ ಪೈಪೋಟಿ ನಡೆಸುತ್ತಿದ್ದು, ಈಗ ಹೊರ ಬಿದ್ದಿರುವ ಕೆಲ ಸಮೀಕ್ಷೆಗಳು ಈ ಬಾರಿ ಸಮ್ಮಿಶ್ರ ಸರ್ಕಾರ ರಚನೆಯ ಸಾಧ್ಯತೆ ಹೇಳುತ್ತಿದ್ದರೂ ಫಲಿತಾಂಶದ ಹಣೆಬರಹ ಬರೆಯಬಲ್ಲ ಮತದಾರ ಮಾತ್ರ ಯಾವುದೇ ಗುಟ್ಟು ಬಿಟ್ಟುಕೊಡದೆ ಮುಗುಮ್ಮಾಗಿ ಉಳಿದಿದ್ದಾನೆ. ಮೇ 15 ರ ಫಲಿತಾಂಶದ ಬಳಿಕ ಮತದಾರನ ಅಂತಿಮ ನಿರ್ಧಾರ ಬಹಿರಂಗವಾಗಲಿದ್ದು, ಅಲ್ಲಿಯವರೆಗೆ ಕಾಯಬೇಕಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...