alex Certify
ಕನ್ನಡ ದುನಿಯಾ       Mobile App
       

Kannada Duniya

ಶುಭ ಸುದ್ದಿ: ಹಿಂಬಡ್ತಿ ಹೊಂದಿದ ನೌಕರರಿಗಿಲ್ಲ ಆತಂಕ

ಸುಪ್ರೀಂ ಕೋರ್ಟ್ ಆದೇಶದಂತೆ ಹಿಂಬಡ್ತಿ ಹೊಂದಿದ ನೌಕರರು ಈಗ ನಿರಾಳರಾಗಿದ್ದಾರೆ. ಈ ನೌಕರರ ಹಿತ ಕಾಯುವ ಉದ್ದೇಶದಿಂದ ರಾಜ್ಯ ಸರ್ಕಾರ ಅಂಗೀಕರಿಸಿದ್ದ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಹೀಗಾಗಿ ಹಿಂಬಡ್ತಿ ಭೀತಿಯಿಂದ ಸುಮಾರು 20 ಸಾವಿರ ನೌಕರರು ಪಾರಾಗಿದ್ದಾರೆ.

ಬಡ್ತಿ ಮೀಸಲಾತಿ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಗೀಕಾರ ಹಾಕಿರುವ ಪತ್ರ ರಾಜ್ಯ ಸರ್ಕಾರದ ಕೈಸೇರಿದ್ದು, ಈ ಹಿನ್ನೆಲೆಯಲ್ಲಿ ಹಿಂಬಡ್ತಿಗೆ ಗುರಿಯಾಗಿದ್ದ ನೌಕರರು ಪುನಃ ತಮ್ಮ ಸ್ಥಾನಕ್ಕೆ ವಾಪಸ್ಸಾಗಲಿದ್ದಾರೆ.

ಈ ಮಧ್ಯೆ ಕೇಂದ್ರ ಸರ್ಕಾರ, ಕರ್ನಾಟಕ ಸೇರಿದಂತೆ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನೌಕರರಿಗೆ ಬಡ್ತಿಯಲ್ಲಿ ಮೀಸಲು ಜಾರಿಗೊಳಿಸುವಂತೆ ನಿರ್ದೇಶನ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...