alex Certify
ಕನ್ನಡ ದುನಿಯಾ       Mobile App
       

Kannada Duniya

ಏನಾಗಲಿದೆ ರಾಜ್ಯ ಸರ್ಕಾರದ ಭವಿಷ್ಯ…?

ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರ್ಕಾರಕ್ಕೆ ಇಂದು ಅಗ್ನಿ ಪರೀಕ್ಷೆ. ಸುಪ್ರೀಂ ಕೋರ್ಟ್ ಆದೇಶದಂತೆ ಇಂದು ಸಂಜೆ 4 ಗಂಟೆಗೆ ಬಹುಮತ ಸಾಬೀತುಪಡಿಸುವ ಅನಿವಾರ್ಯತೆಯಲ್ಲಿರುವ ಯಡಿಯೂರಪ್ಪನವರು ಇದಕ್ಕೆ ಬೇಕಾದ ಸಂಖ್ಯಾಬಲವನ್ನು ಕ್ರೂಢೀಕರಿಸಿಕೊಳ್ಳುವ ಯತ್ನದಲ್ಲಿದ್ದಾರೆ.

ಹೈದರಾಬಾದ್ ನ ಕೃಷ್ಣಾ ತಾಜ್ ಹೋಟೆಲ್ ನಲ್ಲಿದ್ದ ಕಾಂಗ್ರೆಸ್-ಜೆಡಿಎಸ್ ಶಾಸಕರುಗಳು ಇಂದು ಬೆಂಗಳೂರಿಗೆ ಮರಳಿದ್ದು, ಇವರುಗಳ ಪೈಕಿ ಕೆಲವರನ್ನು ಸೆಳೆಯಲು ಬಿಜೆಪಿ ಕೊನೆ ಕ್ಷಣದ ಕಸರತ್ತು ನಡೆಸುತ್ತಿದೆ. ಬಿಜೆಪಿ ನಾಯಕರು ಇಂದಿನ ವಿಶ್ವಾಸಮತ ಯಾಚನೆಯಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ಆತ್ಮವಿಶ್ವಾಸದಲ್ಲಿದ್ದು, ಇದಕ್ಕಾಗಿ ಯಾವ ಕಾರ್ಯತಂತ್ರ ರೂಪಿಸಲಾಗಿದೆ ಎಂಬುದು ಬಹಿರಂಗವಾಗಿಲ್ಲ.

ಅತ್ತ ಕಾಂಗ್ರೆಸ್-ಜೆಡಿಎಸ್ ನಾಯಕರೂ ತಮಗೆ ವಿಶ್ವಾಸಮತ ಸೋಲಿಸುವ ಅಗತ್ಯ ಶಾಸಕರ ಬೆಂಬಲವಿರುವ ಕಾರಣ ಯಡಿಯೂರಪ್ಪನವರ ಸರ್ಕಾರ ಪತನಗೊಳ್ಳಲಿದೆ ಎನ್ನುತ್ತಿದ್ದಾರೆ. ಕಾಂಗ್ರೆಸ್ ಶಾಸಕರುಗಳಾದ ಆನಂದ್ ಸಿಂಗ್ ಹಾಗೂ ಪ್ರತಾಪ್ ಗೌಡ ಪಾಟೀಲ್ ಫಲಿತಾಂಶ ಪ್ರಕಟಗೊಂಡ ಬಳಿಕ ‘ಕೈ’ ನಾಯಕರ ಸಂಪರ್ಕಕ್ಕೆ ಸಿಕ್ಕಿಲ್ಲವಾದರೂ ಇಂದು ನಡೆಯುವ ವಿಶ್ವಾಸಮತ ಯಾಚನೆ ಕಲಾಪಕ್ಕೆ ಹಾಜರಾಗಿ ಪಕ್ಷದ ಆದೇಶವನ್ನು ಪಾಲಿಸುತ್ತಾರಾ ಅಥವಾ ವಿಪ್ ಉಲ್ಲಂಘಿಸಿ ಬಿಜೆಪಿಯನ್ನು ಬೆಂಬಲಿಸುತ್ತಾರಾ ಎಂಬ ಕುತೂಹಲ ಮೂಡಿದೆ. ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾಗಲಿದ್ದು, ಪ್ರಮಾಣವಚನ ಸ್ವೀಕರಿಸಲಿರುವ ನೂತನ ಶಾಸಕರು ಸಂಜೆ 4 ಗಂಟೆಗೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ಸಂಜೆಯೊಳಗಾಗಿ ಏನಾಗಲಿದೆ ರಾಜ್ಯ ಸರ್ಕಾರದ ಭವಿಷ್ಯ ಎಂಬುದು ನಿರ್ಧಾರವಾಗಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...