alex Certify
ಕನ್ನಡ ದುನಿಯಾ       Mobile App
       

Kannada Duniya

ಹೆಚ್.ಡಿ.ಕೆ. ಪ್ರಮಾಣವಚನ ಸಮಾರಂಭಕ್ಕೆ ಭರ್ಜರಿ ಸಿದ್ಧತೆ

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿಯವರು ನಾಳೆ ಸಂಜೆ 4.30 ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಭಾರೀ ಸಿದ್ಧತೆ ನಡೆದಿದೆ.

ವಿಧಾನಸೌಧದ ಪೂರ್ವ ಭಾಗದಲ್ಲಿ ವೇದಿಕೆ ನಿರ್ಮಾಣವಾಗಿದ್ದು, ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ತೃತೀಯರಂಗದ ನಾಯಕರುಗಳು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿರುವ ಹಿನ್ನಲೆಯಲ್ಲಿ ವಿಐಪಿಗಳಿಗೆಂದೇ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ.

ಕುಮಾರಸ್ವಾಮಿಯವರೊಂದಿಗೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ನ ಕೆಲ ಹಿರಿಯ ಶಾಸಕರುಗಳು ಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದ್ದು, ಕುಮಾರಸ್ವಾಮಿಯವರ ಸಂಪುಟಕ್ಕೆ ಯಾರು ಸೇರ್ಪಡೆಯಾಗಲಿದ್ದಾರೆಂಬುದು ಇಂದು ಸಂಜೆ ನಿರ್ಧಾರವಾಗಲಿದೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ, ತಾವು ಇಂದು ಧರ್ಮಸ್ಥಳ ಹಾಗೂ ಶೃಂಗೇರಿಗೆ ಭೇಟಿ ನೀಡುತ್ತಿದ್ದು, ವಾಪಾಸ್ ಬಂದ ಬಳಿಕ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರೊಂದಿಗೆ ಚರ್ಚಿಸಿ ಸಚಿವ ಸಂಪುಟಕ್ಕೆ ಯಾರು ಸೇರ್ಪಡೆಯಾಗಲಿದ್ದಾರೆಂಬುದನ್ನು ಅಂತಿಮಗೊಳಿಸುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...