alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕಾರ ಸ್ವೀಕರಿಸಿ 5 ದಿನವಾದ್ರೂ ಸಚಿವ ಸ್ಥಾನದ ಬಗ್ಗೆ ನಡೆದಿಲ್ಲ ಚರ್ಚೆ

ಕರ್ನಾಟಕದಲ್ಲಿ ಹೈಡ್ರಾಮಾ ನಂತ್ರ ಕಾಂಗ್ರೆಸ್-ಜೆಡಿಎಸ್ ಒಂದಾಗಿ ಸರ್ಕಾರ ರಚನೆಗೆ ಮುಂದಾಯ್ತು. ಮೇ23ರಂದು ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದೂ ಆಗಿದೆ. ನಂತ್ರ ವಿಧಾನಸಭೆಯಲ್ಲಿ ಕುಮಾರಸ್ವಾಮಿ ವಿಶ್ವಾಸಮತ ಸಾಬೀತುಪಡಿಸಿದ್ದಾರೆ. ವಿಶ್ವಾಸಮತ ಯಾಚನೆ ನಂತ್ರ ಮಂತ್ರಿಮಂಡಳ ರಚನೆ ಎನ್ನುತ್ತಿದ್ದ ನಾಯಕರು ಇನ್ನೂ ಸಚಿವ ಸಂಪುಟದ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ.

ಕುಮಾರಸ್ವಾಮಿ ಸಿಎಂ ಆಗಿ 5 ದಿನಗಳು ಕಳೆದಿವೆ. ಆದ್ರೆ ಕುಮಾರಸ್ವಾಮಿ ಸಚಿವ ಸಂಪುಟದಲ್ಲಿ ಯಾರೆಲ್ಲ ಜಾಗ ಪಡೆಯುತ್ತಾರೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಸಂಬಂಧ ಮಾತುಕತೆ ನಡೆಸಲು ಕುಮಾರಸ್ವಾಮಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿದೇಶದಲ್ಲಿದ್ದಾರೆ. ಆದ್ರೂ ದೆಹಲಿಗೆ ಹೊರಟಿರುವ ಕುಮಾರಸ್ವಾಮಿ ಉಳಿದ ನಾಯಕರ ಜೊತೆ ಮಾತುಕತೆ ನಡೆಸಲಿದ್ದಾರಂತೆ. ಕಾಂಗ್ರೆಸ್ ಹಿರಿಯ ನಾಯಕ ವೇಣುಗೋಪಾಲ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಇನ್ನೆರಡು ದಿನಗಳಲ್ಲಿ ಅಂತಿಮ ಪಟ್ಟಿ ಹೊರಬೀಳಲಿದೆ. ರಾಹುಲ್ ವಿದೇಶ ಪ್ರವಾಸ ಇದ್ರ ಮೇಲೆ ಅಡ್ಡ ಪರಿಣಾಮ ಬೀರುವುದಿಲ್ಲವೆಂದು ಕಾಂಗ್ರೆಸ್ ನಾಯಕ ವೇಣುಗೋಪಾಲ್ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಕೆಲವೊಂದು ಭಿನ್ನಮತವಿದೆ. ನೀರಾವರಿ, ಇಂಧನ, ಹಣಕಾಸು ಸೇರಿದಂತೆ ಪ್ರಮುಖ ಖಾತೆಗಳ ಎಳೆದಾಟ ಶುರುವಾಗಿದೆ. ಇದನ್ನು ಪರಸ್ಪರ ಚರ್ಚಿಸಿ ಬಗೆಹರಿಸಿಕೊಳ್ಳುತ್ತೇವೆ ಎಂದು ವೇಣುಗೋಪಾಲ್ ಹೇಳಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...