alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಲ್ ಫೈಟ್ ನಲ್ಲಿ ಹೊಸ ವರಸೆ: ಕಾಂಗ್ರೆಸ್ ನಾಯಕರಿಗೆ ಆರಂಭವಾಯ್ತು ಮತ್ತೊಂದು ತಲೆನೋವು

ಬೆಳಗಾವಿ: ಬೆಳಗಾವಿಯಲ್ಲಿ ಜಾರಕಿಹೊಳಿ ಸಹೋದರರು ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಕಾದಾಟಗಳ ನಡುವೆ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಮೇಶ್ ಜಾರಕಿಹೊಳಿ ತಮ್ಮ ಬೆಂಬಲಿತ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲ್ಲಿಸಿಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ. ಜಾರಕಿಹೊಳಿ ಸಹೋದರರ ಈ ನಡೆ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮತ್ತೊಂದು ತಲೆನೋವಾಗಿ ಪರಿಣಮಿಸಿದೆ.

ಬೆಳಗಾವಿ ಜಿಲ್ಲೆಯ 14 ಸ್ಥಳೀಯ ಸಂಸ್ಥೆಗಳಲ್ಲಿ ಆರರಲ್ಲಿ ಕಾಂಗ್ರೆಸ್, ಮೂರರಲ್ಲಿ ಬಿಜೆಪಿ ಜಯಿಸಿದೆ. ಇನ್ನುಳಿದ ಐದರಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಪಕ್ಷೇತರರು ಇಲ್ಲಿ ನಿರ್ಣಾಯಕರಾಗಿದ್ದಾರೆ. ರಮೇಶ್ ಜಾರಕಿಹೊಳಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗೋಕಾಕ ನಗರಸಭೆ ಹಾಗೂ ಕೊಣ್ಣೂರು ಪುರಸಭೆಯಲ್ಲಿ ಅವರ ಬೆಂಬಲಿತ ಎಲ್ಲ ಪಕ್ಷೇತರರು ಗೆಲುವು ದಾಖಲಿಸಿರುವುದು ಗಮನಾರ್ಹವಾಗಿದೆ. ಈ ಮೂಲಕ ಜಾರಕಿಹೊಳಿ ಹೊಸ ವರಸೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಪಕ್ಷದ ಬಿ ಫಾರಂ ನೀಡದೇ ಪಕ್ಷೇತರರನ್ನು ಕಣಕ್ಕಿಳಿಸಿ ಗೆಲ್ಲಿಸಿರುವ ಜಾರಕಿಹೊಳಿ ಅವರ ನಡೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಕಾಂಗ್ರೆಸ್ ವಲಯದಲ್ಲಿ ಅಸಮಾಧಾನ ಹೊಗೆಯಾಡಲು ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...