alex Certify
ಕನ್ನಡ ದುನಿಯಾ       Mobile App
       

Kannada Duniya

‘ಈ ತಿಂಗಳೊಳಗೆ ಸಚಿವ ಸಂಪುಟ ವಿಸ್ತರಣೆ’

siddaramaiah_karnatka-CMಬಹು ಕಾಲದಿಂದಲೂ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ಈ ತಿಂಗಳ ಅಂತ್ಯದ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮೈಸೂರಿನಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆಲವು ಸಚಿವರನ್ನು ಕೈ ಬಿಡುತ್ತೇವೆ. ಹೊಸ ಮುಖಗಳಿಗೆ ಅವಕಾಶ ನೀಡುತ್ತೇವೆ ಎನ್ನುವ ಮೂಲಕ ಹಾಲಿ ಸಚಿವರ ಪೈಕಿ ಕೆಲವರನ್ನು ಕೈ ಬಿಡುವ ಸುಳಿವು ನೀಡಿದ್ದಾರೆ.

ಸಚಿವ ಸಂಪುಟ ವಿಸ್ತರಣೆಗಾಗಿ ಯಾವುದೇ ಮಾನದಂಡ ಇಟ್ಟುಕೊಂಡಿಲ್ಲವೆಂದಿರುವ ಸಿದ್ದರಾಮಯ್ಯ, ಈ ತಿಂಗಳೊಳಗಾಗಿ ವಿಸ್ತರಣೆ ನಡೆಯುವುದು ನಿಶ್ಚಿತ ಎಂದಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ಬರಗಾಲದ ಹಿನ್ನಲೆಯಲ್ಲಿ ಸದ್ಯಕ್ಕೆ ಸಂಪುಟ ವಿಸ್ತರಣೆ ಮಾಡುವುದಿಲ್ಲವೆಂಬ ಮಾತುಗಳು ಕೇಳಿ ಬಂದಿತ್ತಾದರೂ ಮುಖ್ಯಮಂತ್ರಿಗಳು ಅದಕ್ಕೆ ಈಗ ತೆರೆ ಎಳೆದಿದ್ದಾರೆ. ಸಚಿವ ಸ್ಥಾನಕಾಂಕ್ಷಿಗಳು ಸಿದ್ದರಾಮಯ್ಯನವರ ಹೇಳಿಕೆಯಿಂದ ಉತ್ಸಾಹದಲ್ಲಿದ್ದರೆ, ಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿರುವ ಕೆಲ ಸಚಿವರು ಆತಂಕವನ್ನೆದುರಿಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...