alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ಬಳಿಕ ಶುರುವಾಗಿದೆ ರಾಜಕೀಯ ಲೆಕ್ಕಾಚಾರ

ಶನಿವಾರದಂದು ರಾಜ್ಯದ 222 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳ ಭವಿಷ್ಯ ಮತ ಯಂತ್ರದಲ್ಲಿ ಭದ್ರವಾಗಿದೆ. ಮೇ 15 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಂದಿನ ಐದು ವರ್ಷಗಳ ಕಾಲ ರಾಜ್ಯವನ್ನು ಆಳುವ ಸರ್ಕಾರದ ಸ್ಪಷ್ಟ ಚಿತ್ರಣ ಸಿಗಲಿದೆ.

ಈ ಮಧ್ಯೆ ಮತದಾನದ ಬಳಿಕ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪಕ್ಷ ಗಳಿಸುವ ಸ್ಥಾನಗಳ ಮಾಹಿತಿ ಕಲೆ ಹಾಕುತ್ತಿದ್ದು, ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ತಮ್ಮ ಪಕ್ಷವೇ ಬಹುಮತ ಗಳಿಸುವುದಾಗಿ ಹೇಳಿಕೊಳ್ಳುತ್ತಿವೆ. ಆದರೆ ಈಗ ಹೊರ ಬಿದ್ದಿರುವ ಮತದಾನೋತ್ತರ ಸಮೀಕ್ಷೆಗಳು ಸಮ್ಮಿಶ್ರ ಸರ್ಕಾರದ ಸಾಧ್ಯತೆಯನ್ನು ಹೇಳಿರುವುದು ನಾಯಕರನ್ನು ಒಳಗೊಳಗೆ ಆತಂಕಕ್ಕೀಡು ಮಾಡಿರುವುದು ಸುಳ್ಳಲ್ಲ.

ಹೀಗಾಗಿ ರಾಜಕೀಯ ಲೆಕ್ಕಾಚಾರಗಳು ಆರಂಭವಾಗಿದ್ದು, ಯಾವ ಪಕ್ಷಕ್ಕೂ ಬಹುಮತ ಬರದೆ ಒಂದೊಮ್ಮೆ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಕಿಂಗ್ ಮೇಕರ್ ಸ್ಥಾನದಲ್ಲಿ ಬರುವ ಜೆಡಿಎಸ್ ನಡೆ ಏನಾಗಲಿದೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು, ಯಾವುದೇ ಕಾರಣಕ್ಕೂ ಬಿಜೆಪಿ ಜೊತೆ ಕೈ ಜೋಡಿಸುವುದಿಲ್ಲವೆಂದು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದರಾದರೂ ಮುಂದೆ ನಿರ್ಮಾಣವಾಗುವ ರಾಜಕೀಯ ಪರಿಸ್ಥಿತಿ ಬಳಿಕ ಅವರ ನಿರ್ಧಾರ ಏನಾಗಲಿದೆ ಎಂಬ ಪ್ರಶ್ನೆ ಮೂಡಿದೆ. ಒಂದು ವೇಳೆ ಜೆಡಿಎಸ್, ಕಾಂಗ್ರೆಸ್ ಜೊತೆ ಕೈ ಜೋಡಿಸಲು ಮುಂದಾದರೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯನ್ನಾಗಿ ಒಪ್ಪಿಕೊಳ್ಳುವುದು ಕಷ್ಟದ ಮಾತಾದ ಕಾರಣ ಕಾಂಗ್ರೆಸ್ ನ ಮತ್ತೊಬ್ಬ ನಾಯಕರಿಗೆ ಅದೃಷ್ಟ ಒಲಿಯಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಇದೆಲ್ಲ ಊಹಾಪೋಹಗಳಿಗೆ ಮೇ 15 ರ ಫಲಿತಾಂಶದ ಬಳಿಕ ತೆರೆ ಬೀಳಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...