alex Certify
ಕನ್ನಡ ದುನಿಯಾ       Mobile App
       

Kannada Duniya

ಕೊಚ್ಚಿಯತ್ತ ಮುಖ ಮಾಡಿದ ಕಾಂಗ್ರೆಸ್-ಜೆಡಿಎಸ್ ಶಾಸಕರು

ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಬಹುಮತ ಗಳಿಸದ ಹಿನ್ನಲೆಯಲ್ಲಿ ರಾಜ್ಯಪಾಲ ವಜೂಭಾಯ್ ವಾಲ್, ಅಧಿಕ ಸ್ಥಾನ ಗಳಿಸಿರುವ ಬಿಜೆಪಿಗೆ ಸರ್ಕಾರ ರಚನೆಗೆ ಆಹ್ವಾನಿಸಿದ್ದು, ಅದರಂತೆ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪ ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇನ್ನು 15 ದಿನಗಳೊಳಗಾಗಿ ಬಹುಮತ ಸಾಬೀತುಪಡಿಸುವಂತೆ ರಾಜ್ಯಪಾಲರು ಸೂಚಿಸಿರುವ ಹಿನ್ನಲೆಯಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದರೂ ಅವರ ತಲೆಮೇಲೆ ತೂಗುಗತ್ತಿ ನೇತಾಡುತ್ತಲೇ ಇದೆ.

ಬಹುಮತ ಸಾಬೀತುಪಡಿಸುವ ಅನಿವಾರ್ಯತೆಯಲ್ಲಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯುವ ಯತ್ನದಲ್ಲಿದೆ. ಈ ಹಿನ್ನಲೆಯಲ್ಲಿ ತಮ್ಮ ಶಾಸಕರನ್ನು ಕಾಪಾಡಿಕೊಳ್ಳುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ‘ಆಪರೇಷನ್ ಕಮಲ’ಕ್ಕೆ ಶಾಸಕರುಗಳು ಬಲಿಯಾಗಬಾರದೆಂಬ ಕಾರಣಕ್ಕೆ ರೆಸಾರ್ಟ್ ನಲ್ಲಿ ಶಾಸಕರನ್ನು ಇದುವರೆಗೂ ಒಟ್ಟಾಗಿಟ್ಟುಕೊಂಡಿದ್ದು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಶಾಸಕರುಗಳನ್ನು ಹೊರ ರಾಜ್ಯಕ್ಕೆ ಕರೆದುಕೊಂಡು ಹೋಗಲು ಮುಂದಾಗಿದ್ದಾರೆ.

ಕೇರಳದ ಕೊಚ್ಚಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳನ್ನು ಕರೆದುಕೊಂಡು ಹೋಗಲಾಗುತ್ತಿದೆ ಎನ್ನಲಾಗಿದ್ದು, ಇದಕ್ಕಾಗಿ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಎರಡು ತಂಡಗಳಲ್ಲಿ ಶಾಸಕರುಗಳು ಪ್ರಯಾಣ ಮಾಡಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ದತೆಯನ್ನೂ ಮಾಡಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...