alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಷಣಕ್ಕೊಂದು ತಿರುವು ಪಡೆದುಕೊಳ್ತಿದೆ ರಾಜ್ಯ ರಾಜಕಾರಣ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಲಭಿಸದ ಕಾರಣ ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.

ಚುನಾವಣೆಯಲ್ಲಿ ಅಧಿಕ ಸ್ಥಾನ ಗಳಿಸಿರುವ ಬಿಜೆಪಿಯನ್ನು ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲ ವಜೂಭಾಯ್ ವಾಲಾ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಬಿ.ಎಸ್. ಯಡಿಯೂರಪ್ಪನವರಿಗೆ ಪ್ರಮಾಣವಚನ ಬೋಧಿಸಿದ್ದರು.

ಇದನ್ನು ಪ್ರಶ್ನಿಸಿ ಕಾಂಗ್ರೆಸ್ ಹಾಗೂ ಜೆಡಿಎಸ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ತೀರ್ಪು ಪ್ರಕಟಿಸಿರುವ ಉಚ್ಚ ನ್ಯಾಯಾಲಯ, ಬಹುಮತ ಸಾಬೀತುಪಡಿಸಲು ರಾಜ್ಯಪಾಲರು ನೀಡಿದ್ದ 15 ದಿನಗಳ ಗಡುವಿನ ಬದಲು ನಾಳೆ ಸಂಜೆ 4 ಗಂಟೆಗೆ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದೆ.

ನಾಳಿನ ವಿಧಾನಸಭಾ ಕಲಾಪವನ್ನು ನಡೆಸುವ ಸಲುವಾಗಿ ಹಂಗಾಮಿ ಸ್ಪೀಕರ್ ಆಯ್ಕೆಗೆ ಸುಪ್ರೀಂ ಕೋರ್ಟ್ ಸೂಚಿಸಿದ್ದು, ಅದೀಗ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ಕೆ.ಜಿ. ಬೋಪಯ್ಯನವರನ್ನು ಸರ್ಕಾರ, ಹಂಗಾಮಿ ಸ್ಪೀಕರ್ ರನ್ನಾಗಿ ಆಯ್ಕೆ ಮಾಡಿದ್ದು, ಇದು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಈ ಹಿಂದೆ ಸ್ಪೀಕರ್ ಆಗಿ ಆಯ್ಕೆಯಾಗಿದ್ದ ಕೆ.ಜಿ. ಬೋಪಯ್ಯ ಸರ್ಕಾರದ ಪರ ಪಕ್ಷಪಾತಿಯಾಗಿ ಕಾರ್ಯ ನಿರ್ವಹಿಸಿದ್ದಾರೆಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು, ಈ ನೇಮಕ ಕುರಿತಂತೆ ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ. ಈ ಕುರಿತು ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್ ಗೆ ಅರ್ಜಿ ಸಲ್ಲಿಸಿದ್ದು, ಇಂದೇ ವಿಚಾರಣೆ ನಡೆಸುವಂತೆ ಮನವಿ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆಂಬುದನ್ನು ಕಾದು ನೋಡಬೇಕಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...