alex Certify
ಕನ್ನಡ ದುನಿಯಾ       Mobile App
       

Kannada Duniya

ಖಾತೆ ಹಂಚಿಕೆ ಬಿಕ್ಕಟ್ಟು ಬಗೆಹರಿದು ಬೆನ್ನಲ್ಲೇ ಶುರುವಾಗಿದೆ ಮತ್ತೊಂದು ಸಮಸ್ಯೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ದೊರೆಯದ ಕಾರಣ ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಜೆಡಿಎಸ್ ನ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನ ಜಿ. ಪರಮೇಶ್ವರ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇವರಿಬ್ಬರು ಪ್ರಮಾಣವಚನ ಸ್ವೀಕರಿಸಿ ವಾರ ಕಳೆದರೂ ಸಚಿವ ಸಂಪುಟ ರಚನೆಯಾಗಿಲ್ಲ. ಪ್ರಮುಖ ಖಾತೆಗಳಿಗಾಗಿ ಉಭಯ ಪಕ್ಷಗಳು ಪಟ್ಟು ಹಿಡಿದಿದ್ದ ಕಾರಣ ಸಂಪುಟ ರಚನೆ ವಿಳಂಬವಾಗಿತ್ತು. ಇದೀಗ ಆ ಬಿಕ್ಕಟ್ಟು ಬಗೆಹರಿದು ಹಣಕಾಸು, ಲೋಕೋಪಯೋಗಿ ಹಾಗೂ ಅಬಕಾರಿಯಂತ ಪ್ರಮುಖ ಖಾತೆಗಳು ಜೆಡಿಎಸ್ ಪಾಲಾಗಿದ್ದರೆ, ಗೃಹ, ಇಂಧನ ಮೊದಲಾದವು ಕಾಂಗ್ರೆಸ್ಸಿಗೆ ಲಭಿಸಿವೆ.

ಈ ಹಿನ್ನಲೆಯಲ್ಲಿ ಇನ್ನೆರಡು ದಿನಗಳ ಒಳಗಾಗಿ ಸಂಪುಟ ರಚನೆಯಾಗಬಹುದು ಎಂದು ಹೇಳಲಾಗಿತ್ತಾದರೂ, ಇದೀಗ ಮತ್ತೊಂದು ಸಮಸ್ಯೆ ತಲೆದೋರಿದೆ ಎನ್ನಲಾಗಿದೆ. ಸರ್ಕಾರವನ್ನು ಸುಸೂತ್ರವಾಗಿ ನಡೆಸಿಕೊಂಡು ಹೋಗಲು ಸಮನ್ವಯ ಸಮಿತಿ ರಚನೆ ಅನಿವಾರ್ಯ ಎಂದು ಪ್ರತಿಪಾದಿಸುತ್ತಿರುವ ಹಿರಿಯ ಕಾಂಗ್ರೆಸ್ ನಾಯಕರು, ಎರಡು ಪಕ್ಷಗಳ ಪ್ರಮುಖರನ್ನೊಳಗೊಂಡ ಸಮನ್ವಯ ಸಮಿತಿ ರಚನೆಗೆ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.

ಈಗಾಗಲೇ ಸಂಪುಟ ರಚನೆ ವಿಳಂಬವಾಗಿರುವ ಹಿನ್ನೆಲೆಯಲ್ಲಿ ಜನರ ಆಕ್ರೋಶಕ್ಕೆ ತುತ್ತಾಗಬಹುದು ಎಂಬ ಆತಂಕ ಜೆಡಿಎಸ್ ವರಿಷ್ಠರನ್ನು ಕಾಡುತ್ತಿದ್ದು, ಕಾಂಗ್ರೆಸ್ ನ ಈ ಹೊಸ ಪಟ್ಟು ಈಗ ತಲೆನೋವಾಗಿ ಪರಿಣಮಿಸಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರು ವಿದೇಶಕ್ಕೆ ತೆರಳಿದ್ದು, ಅವರು ಬಂದ ಬಳಿಕ ಈಗ ತಲೆದೋರಿರುವ ಹೊಸ ಸಮಸ್ಯೆ ಬಗೆಹರಿಯಬಹುದು ಎಂದು ನಿರೀಕ್ಷಿಸಲಾಗಿದೆ. ಬಹುತೇಕ ಸೋಮವಾರದೊಳಗೆ ನೂತನ ಸಂಪುಟ ಅಸ್ತಿತ್ವಕ್ಕೆ ಬರುವ ಸಾಧ್ಯತೆ ಇದ್ದು, ಆ ಬಳಿಕ ಸಮನ್ವಯ ಸಮಿತಿ ರಚನೆ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...