alex Certify
ಕನ್ನಡ ದುನಿಯಾ       Mobile App
       

Kannada Duniya

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ: ವಿದ್ಯಾರ್ಥಿನಿಯರದ್ದೇ ಮೇಲುಗೈ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪಿಯು ಬೋರ್ಡ್ ನಿರ್ದೇಶಕಿ ಶಿಖಾ ಸುದ್ದಿಗೋಷ್ಠಿ ನಡೆಸಿ ಪರೀಕ್ಷೆ ಪಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ವಿದ್ಯಾರ್ಥಿನಿಯರೇ ಮುಂದಿದ್ದಾರೆ. ಮೇ. 1 ರಂದು 11 ಗಂಟೆಗೆ ಎಲ್ಲ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಇಂದು 11.30 ರ ನಂತ್ರ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಲಭ್ಯವಾಗ್ತಿದೆ.

ಈ ಬಾರಿ ಶೇಕಡಾ 59.56ರಷ್ಟು ಫಲಿತಾಂಶ ಬಂದಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದ್ದರೆ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಕೊಡಗು ಮೂರನೇ ಸ್ಥಾನದಲ್ಲಿದ್ದು, ಉತ್ತರ ಕನ್ನಡ ನಾಲ್ಕನೇ ಸ್ಥಾನದಲ್ಲಿದೆ. ಚಿಕ್ಕೋಡಿ ಕೊನೆ ಸ್ಥಾನ ಪಡೆದಿದೆ. 685713 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಒಟ್ಟು 68 ಕಾಲೇಜುಗಳಲ್ಲಿ ಶೇಕಡಾ 100ರಷ್ಟು ಫಲಿತಾಂಶ ಬಂದಿದೆ. 118 ಕಾಲೇಜುಗಳಲ್ಲಿ ಶೂನ್ಯ ಫಲಿತಾಂಶ ಬಂದಿದೆ. ಮೇ ಅಂತ್ಯದಲ್ಲಿ ಮಾಕ್ಸ್ ಕಾರ್ಡ್ ಲಭ್ಯವಾಗಲಿದೆ ಎಂದು ಶಿಖಾ ಹೇಳಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇಕಡಾ 71.66 ಫಲಿತಾಂಶ ಬಂದಿದ್ದರೆ ವಿಜ್ಞಾನ ವಿಭಾಗದಲ್ಲಿ ಶೇಕಡಾ 74.38 ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೇಕಡಾ 45.13 ರಷ್ಟು ಫಲಿತಾಂಶ ಬಂದಿದೆ. ಸತತ ಮೂರು ವರ್ಷ ಶೂನ್ಯ ಫಲಿತಾಂಶ ನೀಡಿದ ಕಾಲೇಜುಗಳ ಮಾನ್ಯತೆ ರದ್ದು ಮಾಡಿರುವುದಾಗಿ ಶಿಖಾ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...