alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯೋತ್ಸವ ಪ್ರಶಸ್ತಿ ತಿರಸ್ಕರಿಸಿದ ಡಿ.ಎಸ್. ನಾಗಭೂಷಣ್

ಶಿವಮೊಗ್ಗ: ಉಡುಪಿಯ ಮಾನವ ಹಕ್ಕುಗಳ ಪ್ರತಿಷ್ಠಾನದ ಅಧ್ಯಕ್ಷ ಡಾ. ರವೀಂದ್ರನಾಥ್ ಶಾನುಭಾಗ್ ಅವರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ತಿರಸ್ಕರಿಸಿದ ಬೆನ್ನಲ್ಲೇ, ಶಿವಮೊಗ್ಗದ ಸಾಹಿತಿ ಡಿ.ಎಸ್. ನಾಗಭೂಷಣ್ ಅವರೂ ಅದೇ ನಿರ್ಧಾರ ಕೈಗೊಂಡಿದ್ದಾರೆ.

ಕನ್ನಡ ಮಾಧ್ಯಮ ಕಡ್ಡಾಯ ಜಾರಿ ವಿಷಯದಲ್ಲಿ ಸರ್ಕಾರ ಕ್ರಮ ಕೈಗೊಳ್ಳದಿರುವ ಹಿನ್ನಲೆಯಲ್ಲಿ ನಾಗಭೂಷಣ್ ಅವರು ಪ್ರಶಸ್ತಿ ಸ್ವೀಕರಿಸದಿರಲು ತೀರ್ಮಾನಿಸಿದ್ದಾರೆ.

ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮವನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕೆಂದು ಹಿಂದಿನ ವರ್ಷವೇ ಆಗ್ರಹಿಸಿದ್ದೆ. ಆದರೆ 3 ವರ್ಷಗಳಿಂದ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳದೇ, ನಿರ್ಲಕ್ಷ್ಯ ವಹಿಸಿದೆ. ಇದನ್ನು ಖಂಡಿಸಿ ಪ್ರಶಸ್ತಿಯನ್ನು ನಿರಾಕರಿಸಿದ್ದೇನೆ ಎಂದಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದಾಗಿ ರಾಜ್ಯದಲ್ಲಿ ಕನ್ನಡ ಮಾಧ್ಯಮ ಶಾಲೆಗಳ ಸಂಖ್ಯೆ ಕಡಿಮೆಯಾಗ್ತಿವೆ. ರಾಜ್ಯೋತ್ಸವದ ಸಂದರ್ಭದಲ್ಲಿಯಾದರೂ ಇಂತಹ ಸಮಸ್ಯೆಗಳ ಬಗ್ಗೆ ಸೂಕ್ತ ಪರಿಹಾರ ಕಂಡುಕೊಳ್ಳುವ ಪ್ರಯತ್ನಗಳಾಗಬೇಕೆಂದು ಅವರು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...