alex Certify
ಕನ್ನಡ ದುನಿಯಾ       Mobile App
       

Kannada Duniya

ಅತಂತ್ರದತ್ತ ಫಲಿತಾಂಶ : ಜೆಡಿಎಸ್ ಜೊತೆ ಕಾಂಗ್ರೆಸ್ ಕೈ ಜೋಡಿಸುವ ಯತ್ನ

ಕರ್ನಾಟಕ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರೆದಿದೆ. ಬಿಜೆಪಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವ ಸಾಧ್ಯತೆಯಿದೆ. ಈವರೆಗೆ ಬಿಜೆಪಿ 109 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 71 ಕ್ಷೇತ್ರಗಳಲ್ಲಿ ಮುನ್ನಡೆ  ಸಾಧಿಸಿದ್ರೆ ಜೆಡಿಎಸ್ 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಗೆಲುವಿನ ವಿಚಾರಕ್ಕೆ ಬಂದ್ರೆ ಈವರೆಗೆ ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಜೆಡಿಎಸ್ 11 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ರೆ  ಬಿಜೆಪಿ  39 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಮುನ್ನಡೆ ಗಮನಿಸಿದ್ರೆ ಯಾವ ಪಕ್ಷಕ್ಕೂ ಬಹುಮತ ಬಂದಿಲ್ಲ. ಬಿಜೆಪಿ ಬಹುಮತಗಳಿಸಲು ಇನ್ನೂ 3-4 ನಂಬರ್ ಬೇಕಿದೆ. ಇದನ್ನೇ ಕಾಂಗ್ರೆಸ್-ಜೆಡಿಎಸ್ ಪ್ಲಸ್ ಪಾಯಿಂಟ್ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

ಫಲಿತಾಂಶ ಅತಂತ್ರವಾದ್ರೆ ಜೆಡಿಎಸ್-ಕಾಂಗ್ರೆಸ್ ಒಂದಾಗುವ ಸಾಧ್ಯತೆ ಹೆಚ್ಚಿದೆ. ಈ ಬಗ್ಗೆ ಮಾಸ್ಟರ್ ಪ್ಲಾನ್ ಶುರುವಾಗಿದೆ. ಎರಡೂ ಪಕ್ಷಗಳು ಒಂದಾಗಿ ಸರ್ಕಾರ ರಚಿಸುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ ಎನ್ನಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...