alex Certify
ಕನ್ನಡ ದುನಿಯಾ       Mobile App
       

Kannada Duniya

ಬಾದಾಮಿಯಲ್ಲಿ ಸಿಎಂ ಗೆಲುವು: ಸೋದರನ ಮುಂದೆ ಸೋಲುಂಡ ಮಧು ಬಂಗಾರಪ್ಪ

ಸಿಎಂ ಸಿದ್ಧರಾಮಯ್ಯ ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದಾರೆ. ಚಾಮುಂಡೇಶ್ವರಿ ಕೈ ಬಿಟ್ಟರೂ ಬನಶಂಕರಿ ಕೈ ಬಿಡಲಿಲ್ಲ. ಸಿಎಂ ಸಿದ್ಧರಾಮಯ್ಯ 2 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಒಂದು ಕ್ಷೇತ್ರದಲ್ಲಿ ಸಿಎಂ ಗೆಲುವು ಸಾಧಿಸಲು ಯಶಸ್ವಿಯಾಗಿದ್ದಾರೆ.

ರಾಜಾಜಿನಗರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಗೆಲುವು ಸಾಧಿಸಿದ್ದಾರೆ. ಶಿರಸಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಮತ್ತೆ ಗೆಲುವು ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲಾಗಿದೆ. ಇನ್ನು ಯಲ್ಲಾಪುರದಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಶಿವರಾಂ ಹೆಬ್ಬಾರ್ ಸಾವಿರ ಮತಗಳ ಅಂತರದಿಂದ ಮತ್ತೆ ಗೆಲುವು ಸಾಧಿಸಿದ್ದಾರೆ.

ಕುತೂಹಲ ಮೂಡಿಸಿದ್ದ ಸೊರಬದಲ್ಲಿ ಕುಮಾರ್ ಬಂಗಾರಪ್ಪ ಗೆಲುವು ಸಾಧಿಸಿದ್ದಾರೆ. ಸಹೋದರನ ವಿರುದ್ಧ ಮಧು ಬಂಗಾರಪ್ಪ ಸೋಲುಂಡಿದ್ದಾರೆ.

ಇನ್ನು ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ ಸೋಲುಂಡಿದ್ದಾರೆ. ಗೆಲುವು ಬಿಜೆಪಿ ಪಾಲಾಗಿದೆ. ಕನಕಪುರದಲ್ಲಿ ಡಿಕೆಶಿ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದಾರೆ. 60 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...