alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಕಾಲದಲ್ಲಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ

siddaramaiah budget

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ರಾಜ್ಯ ಬಜೆಟ್ ಮಂಡಿಸಿದ್ದು, ಇದು ಅವರ 11 ನೇ ಬಾರಿಯ ಬಜೆಟ್ ಮಂಡನೆಯಾಗಿದೆ. ಮುಖ್ಯಮಂತ್ರಿಯಾಗಿ 4 ನೇ ಬಾರಿಯ ಬಜೆಟ್ ಮಂಡನೆಯಾಗಿದ್ದು, ಈ ಹಿಂದೆ ಬೇರೆಯವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಹಣಕಾಸು ಸಚಿವರಾಗಿದ್ದ ಸಿದ್ದರಾಮಯ್ಯ 7 ಬಾರಿ ಬಜೆಟ್ ಮಂಡಿಸಿದ್ದರು.

ಮೂಢ ನಂಬಿಕೆಗಳ ವಿರುದ್ದವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಹುಕಾಲದಲ್ಲಿ ಈ ಬಾರಿಯ ಬಜೆಟ್ ಮಂಡಿಸಿರುವುದು ವಿಶೇಷವಾಗಿದೆ. ಚಾಮರಾಜ ನಗರಕ್ಕೆ ಹೋದರೆ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುತ್ತಾರೆಂಬ ಮೂಢ ನಂಬಿಕೆಯನ್ನೂ ಅಲ್ಲಿಗೆ ಹಲವಾರು ಬಾರಿ ಭೇಟಿ ನೀಡುವ ಮೂಲಕ ದೂರ ಮಾಡಿದ್ದ ಸಿದ್ದರಾಮಯ್ಯ, ಈ ಬಾರಿ ರಾಹುಕಾಲದಲ್ಲಿ ಬಜೆಟ್ ಮಂಡಿಸಿದ್ದಾರೆ.

ರಾಹುಕಾಲದಲ್ಲಿ ಬಜೆಟ್ ಮಂಡಿಸುತ್ತಿರುವುದಕ್ಕೆ ಜೆಡಿಎಸ್ ಶಾಸಕ ವೈ.ಎಸ್.ವಿ. ದತ್ತಾ ಅಭಿನಂದಿಸಿದರಲ್ಲದೇ ಮುಖ್ಯಮಂತ್ರಿಗಳ ವೈಚಾರಿಕ ಮನೋಭಾವ ಶ್ಲಾಘನೀಯವೆಂದರು. ಕಳೆದ ಬಾರಿ ಮಂಡಿಸಿದ್ದ ಬಜೆಟ್ ನಲ್ಲಿನ ಆನೇಕ ಯೋಜನೆಗಳು ಇಂದಿಗೂ ಜಾರಿಗೆ ಬಂದಿಲ್ಲವೆಂಬ ಆರೋಪಗಳ ನಡುವೆಯೂ ಸಿದ್ದರಾಮಯ್ಯನವರು ಬಜೆಟ್ ಮಂಡಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...