alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕ ಮುಕ್ತ ವಿವಿ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಸಿಹಿಯಾದ ಸುದ್ದಿ ಇಲ್ಲಿದೆ. ಪದವಿ ಪಡೆದು ಅತಂತ್ರರಾಗಿರುವ ವಿದ್ಯಾರ್ಥಿಗಳು ಇನ್ನು ಭಯ ಪಡುವಂತಿಲ್ಲ.

ಕರ್ನಾಟಕ ರಾಜ್ಯ ಮುಕ್ತ ವಿವಿಯ ಬಿಕ್ಕಟ್ಟು ಇತ್ಯರ್ಥಪಡಿಸಿ ಹೊಸ ಮಾರ್ಗಸೂಚಿಗಳೊಂದಿಗೆ ಮತ್ತೆ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ತಪ್ಪು ಮಾಡಿದ ಅಧಿಕಾರಿಗಳಿಗೆ ಶಿಕ್ಷೆಯಾಗಲಿದೆ. ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಗೊಂದಲ ಬಗೆಹರಿಸಿ ಪದವಿ ನೀಡಲು ತೀರ್ಮಾನಿಸಲಾಗಿದೆ. ಪದವಿ ಮುಗಿಸಿದ ವಿದ್ಯಾರ್ಥಿಗಳಿಗೆ ಬ್ರಿಡ್ಜ್ ಕೋರ್ಸ್ ನಡೆಸಲಾಗುವುದು. ಪದವಿ ಕೋರ್ಸ್ ಮುಗಿಸಿದ್ದಾರೆಯೇ ಇಲ್ಲವೇ ಎಂಬುದನ್ನು ತಿಳಿಯಲು ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ಮೂಲಕ ಪದವಿ ಪ್ರದಾನ ಮಾಡಲಾಗುವುದು. ಇದರಿಂದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗಲಿದೆ ಎಂದು ಹೇಳಿದ್ದಾರೆ.

ಮುಂದಿನ ವಾರ ದೆಹಲಿಯಲ್ಲಿ ಸಭೆ ನಡೆಸಿ ಈ ಕುರಿತು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ವಾಹಿನಿಯೊಂದಕ್ಕೆ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...