alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಷಣಕ್ಕೊಂದು ತಿರುವು ಪಡೆಯುತ್ತಿದೆ ರಾಜ್ಯ ರಾಜಕಾರಣ

ರಾಜ್ಯ ರಾಜಕಾರಣ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಮಧ್ಯೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ಸಭೆ ನಡೆದಿದ್ದು, ಸರ್ಕಾರ ಪತನಗೊಳಿಸುವ ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೆಣೆಯಲು ತೀರ್ಮಾನ ಕೈಗೊಳ್ಳಲಾಗಿದೆ.

ಸಿದ್ದರಾಮಯ್ಯನವರ ಕಾವೇರಿ ನಿವಾಸದಲ್ಲಿ ಈ ಸಭೆ ನಡೆದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರನ್ನು ಸೆಳೆಯಲು ಬಿಜೆಪಿ ಯತ್ನಿಸಿದರೆ ಇದಕ್ಕೆ ಪ್ರತಿಯಾಗಿ ಬಿಜೆಪಿ ಶಾಸಕರನ್ನು ಕರೆ ತರಲು ಯತ್ನಿಸಬೇಕೆಂದು ಮಾತಾಡಿಕೊಳ್ಳಲಾಗಿದೆ.

ಜೊತೆಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯ ಹೆಸರನ್ನು ಈಗಲೇ ಘೋಷಣೆ ಮಾಡದಿರಲು ಸಹ ನಿರ್ಧರಿಸಲಾಗಿದೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಚಿತಾವಣೆಯಿಂದ ಅಡ್ಡ ಮತದಾನ ನಡೆಯುವ ಸಾಧ್ಯತೆ ಇರುವುದರಿಂದ ನಾಮಪತ್ರ ಸಲ್ಲಿಕೆ ಸಂದರ್ಭದ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ಘೋಷಿಸಲು ತೀರ್ಮಾನಿಸಲಾಗಿದೆ.

ಸಿದ್ದರಾಮಯ್ಯನವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಪಾಲ್ಗೊಂಡಿದ್ದರು.

ಈ ಮಧ್ಯೆ ಮುಖ್ಯಮಂತ್ರಿ ಕುಮಾರಸ್ವಾಮಿಯವರ ದಂಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ರಾಜ್ಯಪಾಲರಿಗೂ ಈ ಕುರಿತು ದೂರು ನೀಡಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...