alex Certify
ಕನ್ನಡ ದುನಿಯಾ       Mobile App
       

Kannada Duniya

ಕರ್ನಾಟಕದ ವಿದ್ಯಾರ್ಥಿಗಳು ಮಹಾರಾಷ್ಟ್ರದಲ್ಲಿ ನೀರುಪಾಲು

students

ಪ್ರವಾಸಕ್ಕೆ ತೆರಳಿದ್ದ ಕರ್ನಾಟಕದ 8 ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ವೈರಿ ಸಮುದ್ರದಲ್ಲಿ ಕೊಚ್ಚಿಹೋಗಿದ್ದಾರೆ. ಮೃತ ವಿದ್ಯಾರ್ಥಿಗಳೆಲ್ಲ ಬೆಳಗಾವಿಯ ಮರಾಠಾ ಎಂಜಿನಿಯರಿಂಗ್ ಕಾಲೇಜಿನವರು. ಪಿಕ್ ನಿಕ್ ಗೆ ಅಂತಾ ಒಟ್ಟು 50 ವಿದ್ಯಾರ್ಥಿಗಳು ಬೀಚ್ ಗೆ ಬಂದಿದ್ರು.

ಸ್ಥಳೀಯರು ಎಚ್ಚರಿಸಿದ್ರೂ ಕೇಳದೆ ಆಳ ಸಮುದ್ರಕ್ಕೆ ಇಳಿದಿದ್ದಾರೆ. ಈ ಪೈಕಿ ಒಟ್ಟು 11 ವಿದ್ಯಾರ್ಥಿಗಳು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಅವರಲ್ಲಿ ಮೂವರನ್ನು ಮೀನುಗಾರರು ರಕ್ಷಿಸಿದ್ದಾರೆ. 8 ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಅವರಲ್ಲಿ ಇಬ್ಬರು ಯುವತಿಯರು ಕೂಡ ಇದ್ದಾರೆ.

ಮೀನುಗಾರರು ರಕ್ಷಿಸಿದ ಮೂವರಲ್ಲಿ ಓರ್ವ ವಿದ್ಯಾರ್ಥಿಯ ಸ್ಥಿತಿ ಚಿಂತಾಜನಕವಾಗಿದೆ. ಮಲ್ವಾನ್ ಪ್ರದೇಶದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗ್ತಿದೆ ಅಂತಾ ಪೊಲೀಸರು ತಿಳಿಸಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...