alex Certify
ಕನ್ನಡ ದುನಿಯಾ       Mobile App
       

Kannada Duniya

ಸೋಲು- ಗೆಲುವಿನ ಲೆಕ್ಕಾಚಾರಕ್ಕೆ ನಾಳೆ ತೆರೆ

electronic-voting-machines

ಬಹು ನಿರೀಕ್ಷೆಯ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯ ಫಲಿತಾಂಶ ನಾಳೆ ಪ್ರಕಟವಾಗಲಿದ್ದು, ಸೋಲು- ಗೆಲುವಿನ ಲೆಕ್ಕಾಚಾರಕ್ಕೆ ನಾಳೆ ಮಧ್ಯಾಹ್ನದೊಳಗೆ ತೆರೆ ಬೀಳಲಿದೆ.

ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರಲ್ಲಿ ನಡೆಯುತ್ತಿದ್ದ ಸೋಲು- ಗೆಲುವಿನ ಲೆಕ್ಕಾಚಾರ ಅಂತಿಮ ಹಂತ ತಲುಪಿದೆ. ಎದೆಬಡಿತ ಜೋರಾಗತೊಡಗಿದೆ. ಕೆಲವೆಡೆ ಅಭ್ಯರ್ಥಿಗಳ ಸೋಲು- ಗೆಲುವಿನ ಬಗ್ಗೆ ಬಾಜಿ ಕೂಡ ನಡೆದಿದ್ದು, ಎಲ್ಲಾ ಲೆಕ್ಕಾಚಾರಗಳಿಗೆ ನಾಳೆ ತೆರೆ ಬೀಳಲಿದೆ.

ಜಿಲ್ಲಾ ಮತ್ತು ತಾಲ್ಲೂಕ್ ಪಂಚಾಯಿತಿ ಚುನಾವಣೆ ಮತ ಎಣಿಕೆ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಮತ ಎಣಿಕೆ ಕೊಠಡಿಯೊಳಗೆ ಮೊಬೈಲ್, ಧೂಮಪಾನ, ಹೊಗೆಸೊಪ್ಪು, ಗುಟ್ಕಾ ಸೇವನೆ, ಕೆಮಿಕಲ್, ಬೆಂಕಿಪೊಟ್ಟಣ ಸೇರಿದಂತೆ ಇನ್ನಿತರ ಮಾದಕ ವಸ್ತುಗಳನ್ನು ತರುವುದು ಕಡ್ಡಾಯವಾಗಿ ನಿಷೇಧಿಸಲಾಗಿದ್ದು, ಸಿಸಿ ಕ್ಯಾಮರಾವನ್ನು ಅಳವಡಿಸಲಾಗಿದೆ.

ಮತ ಎಣಿಕೆ ಪ್ರಕ್ರಿಯೆ ನಡೆಯುವ ಕೇಂದ್ರಗಳ ಸುತ್ತ 200 ಮೀಟರ್ 144 ನೇ ಸೆಕ್ಷನ್ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ನಿಷೇಧಾಜ್ಞೆ ಅವಧಿಯಲ್ಲಿ ಪಟಾಕಿ ಸಿಡಿಸುವಂತಿಲ್ಲ. ಮಾರಾಕಾಸ್ತ್ರಗಳನ್ನು ಹಿಡಿದು ಓಡಾಡುವುದಾಗಲಿ, ಪ್ರಚೋದನಾಕಾರಿ ಹೇಳಿಕೆಗಳನ್ನಾಗಲಿ ನೀಡುವುದನ್ನು ನಿಷೇಧಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...